ಮೈಸೂರು:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಸ್.ವಿದ್ಯಾಶಂಕರ್ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ ವಿಚಾರಣೆ ನಡೆಸಿ ಎಲ್ಲಾ ವಿಷಯದ ಬಗ್ಗೆ ಮಾಹಿತಿ ಒದಗಿಸುವಂತೆ ಯುಜಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಎಸ್.ವಿದ್ಯಾಶಂಕರ್ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಆರೋಪದ ಬಗ್ಗೆ ಪೂರ್ಣ ವಿಚಾರಣೆ ನಡೆಸಿ, ಎಲ್ಲಾ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಯುಜಿಸಿ (ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ) ಪತ್ರ ಬರೆದಿದೆ.
ಮುಕ್ತ ವಿವಿಯ ಕುಲಪತಿಗಳಾದ ಪ್ರೊ.ಎಸ್. ವಿದ್ಯಾಶಂಕರ್ ಅವಶ್ಯಕತೆ ಇಲ್ಲದೆ ಇದ್ದರೂ ಹೆಚ್ಚು ನೇಮಕಾತಿಗಳನ್ನು ಮಾಡಿಕೊಂಡಿದ್ದಾರೆ. ಹೆಚ್ಚು ಪ್ರಾದೇಶಿಕ ಕೇಂದ್ರಗಳನ್ನು(ರೀಜನಲ್ ಸೆಂಟರ್) ಸ್ಥಾಪನೆ ಮಾಡಿಕೊಂಡಿದ್ದಾರೆ. ದೂರ ಶಿಕ್ಷಣವನ್ನು ಕರೆಸ್ಪಾಂಡೆಂಟ್ ಶಿಕ್ಷಣವನ್ನಾಗಿ ಮಾರ್ಪಡಿಸಲಾಗಿದೆ. ಯುಜಿಸಿ ನಿಯಮಗಳಿಗೆ ವಿರುದ್ಧವಾಗಿ ಆಡಳಿತ ಹಾಗೂ ಕೋರ್ಸ್ಗಳು ನಡೆಯುತ್ತಿವೆ ಎಂದು ಆರೋಪಿಸಿ ವಿಶ್ರಾಂತ ಕುಲಪತಿ ಪ್ರೊ.ಎನ್.ಎಸ್.ರಾಮೇಗೌಡ ಅವರು ಯುಜಿಸಿಗೆ ಪತ್ರ ಬರೆದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.