ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈಸೂರಿನ ಶಿಲ್ಪಿಯಾದ ಅರುಣ್ ಯೋಗರಾಜ್ ಅವರು ಭೇಟಿ ಮಾಡಿ ಸುಭಾಶ್ಚಂದ್ರ ಬೋಸ್ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದರು. ಶಿಲ್ಪ ಕಲೆಯಲ್ಲಿ ಅರುಣ್ ಯೋಗಿರಾಜ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದ್ದಾರೆ. ಇತ್ತೀಚೆಗೆ ಕೇದಾರನಾಥ್ನಲ್ಲಿ ಅವರು ಕೆತ್ತನೆ ಮಾಡಿದ ಆದಿ ಶಂಕರಾಚಾರ್ಯ ಪ್ರತಿಮೆಯನ್ನು ಉದ್ಘಾಟಿಸಲಾಗಿದೆ.
ಮಂಗಳವಾರ ಪ್ರಧಾನಿ ಮೋದಿ ಅವರನ್ನು ಮಾಡಿರುವ ಅರುಣ್ ಯೋಗಿರಾಜ್ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಬೋಸ್ ಪ್ರತಿಮೆ ಉಡುಗೊರೆಯಾಗಿ ನೀಡಿದ್ದಾರೆ. ಈ ಬಗ್ಗೆ ಸ್ವತಃ ಪ್ರಧಾನಿ ಅವರೇ ಟ್ವೀಟ್ ಮಾಡಿದ್ದಾರೆ. 'ಇವತ್ತು ಅರುಣ್ ಯೋಗಿರಾಜ್ ಅವರನ್ನು ಭೇಟಿ ಮಾಡಿದ್ದಕ್ಕೆ ಸಂತೋಷವಾಗಿದೆ. ನೇತಾಜಿ ಬೋಸ್ ಅವರ ಶಿಲ್ಪವನ್ನು ನೀಡಿರುವುದಕ್ಕೆ ಅವರಿಗೆ ಕೃತಜ್ಞರಾಗಿರುತ್ತೇವೆ' ಎಂದು ಮೋದಿ ಟ್ವೀಟ್ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.
ಇಂಡಿಯಾ ಗೇಟ್ ಬಳಿ ಬೋಸ್ ಪ್ರತಿಮೆ:ಪ್ರಧಾನಿ ಮೋದಿ ಮತ್ತು ಶಿಲ್ಪಿ ಅರುಣ್ ಯೋಗರಾಜ್ ಭೇಟಿ ಬಗ್ಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದು, ದೆಹಲಿಯ ಇಂಡಿಯಾ ಗೇಟ್ ಬಳಿ ಸುಭಾಶ್ಚಂದ್ರ ಬೋಸ್ ಪ್ರತಿಮೆಯನ್ನು ನಿರ್ಮಿಸಲು ಅರುಣ್ ಯೋಗಿರಾಜ್ ಅವರಿಗೆ ನೀಡಲಾಗುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಯೋಗ ಕಾರ್ಯಕ್ರಮಕ್ಕೆ ಪ್ರಧಾನಿಗೆ ಆಹ್ವಾನ:ಮೈಸೂರಿನಲ್ಲಿ ನಡೆಯುವ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ಮೋದಿ ಅವರಿಗೆ ಸಂಸದ ಪ್ರತಾಪ್ ಸಿಂಹ ಆಹ್ವಾನ ನೀಡಿದ್ದಾರೆ. ಕುಟುಂಬ ಸಮೇತರಾಗಿ ಪ್ರಧಾನಿಯನ್ನು ಭೇಟಿ ಮಾಡಿದ ಸಂಸದರು, ಅಂತಾರಾಷ್ಟ್ರೀಯ ಯೋಗ ದಿನದ ನಿಮಿತ್ತ ಜೂನ್21ರಂದು ಮೈಸೂರಿನಲ್ಲಿ ಆಯೋಜಿಸಲಾಗಿರುವ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ಅವರಿಗೆ ಆಹ್ವಾನಿಸಲಾಯಿತು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಯಾರಿಗೆ ಬೇವು, ಯಾರಿಗೆ ಬೆಲ್ಲ: ಸಂಪುಟ ಸರ್ಕಸ್ಗೆ ಬೀಳುತ್ತಾ ತೆರೆ?