ಮೈಸೂರು: ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ಮೋಸ ಆಗುವುದಿಲ್ಲ ಎಂದು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಅನ್ಯಾಯವಾಗಲ್ಲ: ಸಚಿವೆ ಶೋಭಾ ಕರಂದ್ಲಾಜೆ - ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಹೆಚ್ಚುವರಿ ನೀರನ್ನ ಸಂಗ್ರಹ ಮಾಡಲು ಮೇಕೆದಾಟು ಆಣೆಕಟ್ಟು ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ತಮಿಳುನಾಡಿನ ರೈತರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಶೋಭಾ ಕರಂದ್ಲಾಜೆ
ಮೇಕೆದಾಟು ಯೋಜನೆ ಕುರಿತು ಶೋಭಾ ಕರಂದ್ಲಾಜೆ ಹೇಳಿಕೆ
ತಿ.ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ನೀರನ್ನ ಸಂಗ್ರಹ ಮಾಡಲು ಮೇಕೆದಾಟು ಆಣೆಕಟ್ಟು ನಿರ್ಮಾಣ ಮಾಡುತ್ತಿದ್ದೇವೆ. ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಕೂಡ ಸಹಮತ ಕೊಡಬೇಕು ಎಂದು ಮನವಿ ಮಾಡಿದರು.
ನ್ಯಾಯಾಧಿಕರಣ ಆದೇಶದಂತೆ ತಮಿಳುನಾಡಿಗೆ ಬಿಡಬೇಕಾದ ನೀರನ್ನ ರಾಜ್ಯ ಸರ್ಕಾರ ಬಿಡುಗಡೆ ಮಾಡುತ್ತಿದೆ. ನಮ್ಮ ರಾಜ್ಯದಲ್ಲಿ ನೀರು ಇದ್ದಾಗ ಹಾಗೂ ಇಲ್ಲದಿದ್ದಾಗಲೂ ನೀರು ಕೊಟ್ಟಿದ್ದೇವೆ. ಆದಕ್ಕಾಗಿ ಮೇಕೆದಾಟು ವಿಚಾರವಾಗಿ ಸಹಕಾರ ನೀಡಬೇಕು ಎಂದರು.