ಕರ್ನಾಟಕ

karnataka

ETV Bharat / city

ಸಿದ್ದರಾಮಯ್ಯ ಮುಂದಿನ ಹಾಗೂ ಶಾಶ್ವತ ಸಿಎಂ: ಮತ್ತೆ ಮೊಳಗಿದ ಘೋಷಣೆ - ಮುಂದಿನ ಮುಖ್ಯಮಂತ್ರಿ

ಈಗಾಗಲೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಾರು ಎಂಬ ಘೋಷಣೆ ಕೂಗಬಾರದು ಎಂದು ಹೇಳಿದ್ದಾರೆ. ಆದರೆ, ಅಭಿಮಾನಿಗಳು ಮಾತ್ರ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗುತ್ತಲೇ ಇದ್ದಾರೆ.

siddaramaiah-is-next-cm-slogan
ಸಿದ್ದರಾಮಯ್ಯ

By

Published : Dec 11, 2021, 7:11 PM IST

ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಹಾಗೂ ಶಾಶ್ವತ ಸಿಎಂ ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ ಪ್ರಸಂಗ ಸಿದ್ದರಾಮಯ್ಯ ಅವರ ಹುಟ್ಟೂರು ಸಿದ್ದರಾಮನ ಹುಂಡಿಯಲ್ಲಿ ನಡೆಯಿತು.

ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್ ಸದಸ್ಯತ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆಗಮಿಸಿದ್ದ ಸಿದ್ದರಾಮಯ್ಯಗೆ ಗ್ರಾಮದ ಯುವಕರು ಹಾಗೂ ಪಕ್ಷದ ಕಾರ್ಯಕರ್ತರು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಘೋಷಣೆಗಳನ್ನು ಕೂಗಿದರು.

ಈಗಾಗಲೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಾರು ಎಂಬ ಘೋಷಣೆ ಕೂಗಬಾರದು ಎಂದು ಹೇಳಿದ್ದಾರೆ. ಆದರೆ, ಅಭಿಮಾನಿಗಳು ಮಾತ್ರ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗುತ್ತಲೇ ಇದ್ದಾರೆ.

ಕಾರ್ಯಕ್ರಮ ಉದ್ಘಾಟಿಸಲು ಆಗಮಿಸಿದ ಸಿದ್ದರಾಮಯ್ಯ ಅವರು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಪಕ್ಷದ ಮುಖಂಡರೊಂದಿಗೆ ಗ್ರಾಮದ ಸ್ವಾಗತ ಕಮಾನಿನಿಂದ, ವೇದಿಕೆಯವರೆಗೆ ಎತ್ತಿನಗಾಡಿಯಲ್ಲಿ ಮೆರವಣಿಗೆಯಲ್ಲಿ ತೆರಳಿ ಗಮನ ಸೆಳೆದರು.

ABOUT THE AUTHOR

...view details