ಮೈಸೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನಲೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಟಿ ಕಾಟೂರಿನಲ್ಲಿರುವ ತಮ್ಮ ತೋಟದ ಮನೆಗೆ ಆಗಮಿಸಿ ವಿಶ್ರಾಂತಿ ಪಡೆಯತ್ತಿದ್ದಾರೆ.
ಕೋವಿಡ್ ಕಾವು: ತೋಟದ ಮನೆಯಲ್ಲಿ ವಾಸ್ತವ್ಯ ಹೂಡಿದ ಸಿದ್ದರಾಮಯ್ಯ - Siddaramaiah staying t karuru farmhouse
ಬೆಂಗಳೂರಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ನಗರದ ಟಿ ಕಾಟೂರಿನಲ್ಲಿರುವ ತಮ್ಮ ತೋಟದ ಮನೆಯಲ್ಲಿ ವಾಸ್ತವ್ಯ ಹೂಡಿದ್ದಾರೆ.
ಸಿದ್ದರಾಮಯ್ಯ
ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನು ನೋಡಲು ಬಹಳ ಜನ ಬೆಂಗಳೂರಿನ ಮನೆಗೆ ಆಗಮಿಸುತ್ತಿದ್ದರು. ಹೀಗಾಗಿ ಸೋಂಕು ಹರಡುವ ಭೀತಿ ಹಿನ್ನಲೆ ಶಾಸಕರಾಗಿರುವಅವರ ಪುತ್ರ ಡಾ. ಯತೀಂದ್ರ ಸಲಹೆ ಮೇರೆಗೆ ತೋಟದ ಮನೆಯಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂದು ಮೂಲಗಳು ಖಚಿತ ಪಡಿಸಿವೆ.
ಸದ್ಯ ತಮ್ಮ ತೋಟದ ಮನೆಯಲ್ಲಿ ವಾಸ್ತವ್ಯ ಹೂಡಿರುವ ಸಿದ್ದರಾಮಯ್ಯ, ಅಲ್ಲಿಂದ ಯಾವಾಗ ಮರಳುತ್ತಾರೆ ಎಂಬುದರ ಕುರಿತು ಮಾಹಿತಿ ಇಲ್ಲ.