ಕರ್ನಾಟಕ

karnataka

ETV Bharat / city

ಪರಿಹಾರಕ್ಕೂ ಮೊದಲು ಕೊರೊನಾ ಸಾವಿನ ಮರು ಸಮೀಕ್ಷೆ ಆಗಬೇಕು: ಸಿದ್ದರಾಮಯ್ಯ - Corona death re survey

ಕೊರೊನಾದಿಂದ ಮೃತರಾದ ವ್ಯಕ್ತಿಗಳ ಕುಟುಂಬಕ್ಕೆ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯ ನಿಯಮದಂತೆ ಪರಿಹಾರ ನೀಡಬೇಕೆಂಬ ನಮ್ಮ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದರೂ‌ ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ಹಾಗಾಗಿ‌ ಕೊರೊನಾ ಸಾವಿನ ಮರು ಸಮೀಕ್ಷೆ ನಡೆಸಬೇಕೆಂದು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Siddaramaiah
ಸಿದ್ದರಾಮಯ್ಯ

By

Published : Jun 30, 2021, 10:26 PM IST

ಮೈಸೂರು: ಸುಪ್ರೀಂಕೋರ್ಟ್ ಆದೇಶದನ್ವಯ ಕೊರೊನಾದಿಂದ‌ ಮೃತಪಟ್ಟವರಿಗೆಲ್ಲರಿಗೂ ಪರಿಹಾರ ಸಿಗಬೇಕಾದರೆ‌ ಸಾವಿನ‌‌ ನಿಖರವಾದ ಸಂಖ್ಯೆ‌ ಲಭ್ಯವಾಗಬೇಕು. ಹಾಗಾಗಿ‌ ಕೊರೊನಾ ಸಾವಿನ ಮರುಸಮೀಕ್ಷೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ಕೊರೊನಾದಿಂದ ಮೃತಪಟ್ಟವರಿಗೆ ‌ಪರಿಹಾರ ನೀಡಲು 6 ವಾರಗಳೊಳಗೆ ಮಾರ್ಗದರ್ಶಿ ಸೂತ್ರವನ್ನು ಸಿದ್ಧಪಡಿಸಬೇಕೆಂದು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ರಾಷ್ಟ್ರೀಯ ವಿಕೋಪ ಪರಿಹಾರ ನಿಧಿ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಒಂದು‌ ಕುಟುಂಬದಲ್ಲಿ ಕೊರೊನಾದಿಂದ ಸಾವಿಗೀಡಾದ ಒಬ್ಬ ವ್ಯಕ್ತಿಗೆ ಮಾತ್ರ ಒಂದು‌ ಲಕ್ಷ ರೂಪಾಯಿ ಪರಿಹಾರ ನೀಡುವ ಸರ್ಕಾರದ ನಿರ್ಧಾರ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯ ನಿಯಮಗಳಿಗೆ ವಿರುದ್ಧವಾಗಿದೆ ಎಂಬ ನಮ್ಮ ವಾದಕ್ಕೆ ಸುಪ್ರೀಂಕೋರ್ಟ್‌ ಸಹಮತ ವ್ಯಕ್ತಪಡಿಸಿರುವುದು ಸ್ವಾಗತಾರ್ಹ ಎಂದು ಹೇಳಿದ್ದಾರೆ.

ಕೊರೊನಾದಿಂದ ಮೃತರಾದ ವ್ಯಕ್ತಿಗಳ ಕುಟುಂಬಕ್ಕೆ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯ ನಿಯಮದಂತೆ ಪರಿಹಾರ ನೀಡಬೇಕೆಂಬ ನಮ್ಮ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದರೂ‌ ಸುಪ್ರೀಂಕೋರ್ಟ್ ಪುರಸ್ಕರಿಸಿದೆ. ಈಗಲಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾನವೀಯತೆಯಿಂದ ನಡೆದುಕೊಳ್ಳಲಿ ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details