ಕರ್ನಾಟಕ

karnataka

ETV Bharat / city

ಗಿರೀಶ್ ಕಾರ್ನಾಡ್ ನಿಧನ: ಧ್ವನಿ ಮತ್ತು ಬೆಳಕು ಕಾರ್ಯಕ್ರಮ 3 ದಿವಸ ಸ್ಥಗಿತ - undefined

ಡಾ.ಗಿರೀಶ್ ಕಾರ್ನಾಡ್ ನಿಧನದ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಮೂರು ದಿನಗಳವರೆಗೆ ಸ್ಥಗಿತಗೊಳಿಸಲಾಗಿದೆ.

ಮೈಸೂರು ಅರಮನೆ ಆವರಣ

By

Published : Jun 11, 2019, 4:25 AM IST

ಮೈಸೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಗಿರೀಶ್ ಕಾರ್ನಾಡ್ ನಿಧನದ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ರಾಜ್ಯಾದಾದ್ಯಂತ ಮೂರು ದಿನಗಳ ಶೋಕಾಚರಣೆ ಪ್ರಯುಕ್ತ ಮೈಸೂರು ಅರಮನೆ ಆವರಣದಲ್ಲಿ ಸಂಜೆ 7 ರಿಂದ 8ರ ವರೆಗೆ ನಡೆಸಲ್ಪಡುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಜೂ.10ರಿಂದ 12ರ ವರೆಗೆ ಸ್ಥಗಿತಗೊಳಿಸಲಾಗಿದೆ.

ಜೂನ್ 13 ರಂದು ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿರುತ್ತದೆ‌ ಎಂದು ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details