ಮೈಸೂರು :ಜ.2ರಂದು ನಂಜನಗೂಡು ತಾಲೂಕಿನ ಹೆಮ್ಮರಗಾಲದ 10ನೇ ತರಗತಿ ವಿದ್ಯಾರ್ಥಿಯ ಮೃತ ದೇಹ ಹಳೇಪುರ ಕೆರೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿತ್ತು.
ಈತನ ಸಹಪಾಠಿಗಳು ಮಹೇಶ್‌ನನ್ನು ಕೆರೆ ಬಳಿ ಕರೆದುಕೊಂಡು ಹೋಗಿ ವಾಮಾಚಾರ ಮಾಡಿ ಸಾಯಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿತ್ತು. ವಾಮಾಚಾರ ಶಂಕೆ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿ, ಹಲವರ ವಿಚಾರಣೆ ನಡೆಸುತ್ತಿದ್ದಾರೆ.
ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಬಾಲಕನ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ.
ಜ.2ರಂದು ಮಹೇಶ್ ಎಂಬ ಹುಡುಗನ ಮೃತದೇಹ ಹಳೇಪುರ ಕೆರೆಯಲ್ಲಿ ಪತ್ತೆಯಾಗಿದೆ. ವಾಮಾಚಾರಕ್ಕೆ ತಮ್ಮ ಮಗನನ್ನು ಬಲಿ ಕೊಡಲಾಗಿದೆ ಎಂದು ದೂರು ದಾಖಲಾಗಿದೆ. ಕವಲಂದೆ ಪೊಲೀಸರು ಹೆಮ್ಮರಗಾಲಕ್ಕೆ ತೆರಳಿ ಪರಿಶೀಲಿಸಿದ್ದಾರೆ ಎಂದರು.