ಮೈಸೂರು:ಚಾಮುಂಡಿಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಯೋಜನೆಯನ್ನು ಕೈಬಿಡುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಪತ್ರ ಬರೆದು ಆಗ್ರಹಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವ ಶ್ರೀನಿವಾಸ್ ಪ್ರಸಾದ್ ಅವರು, ರೋಪ್ ವೇ ಕಾಮಗಾರಿ ಕೈಗೊಂಡರೆ ಭೂಮಿ ಸಡಿಲಗೊಂಡು ಬೆಟ್ಟದ ಪರಿಸರಕ್ಕೆ ಹಾನಿಯಾಗಲಿದೆ.
ಪರಿಸರವಾದಿಗಳು ಅದನ್ನು ವಿರೋಧಿಸುವುದರಲ್ಲಿ ಅರ್ಥವಿದೆ. ಪರಿಸರಕ್ಕೆ ಅಪಾಯವಿರುವ ರೋಪ್ ವೇ ನಿರ್ಮಾಣದ ನಿರ್ಧಾರ ಸೂಕ್ತವಲ್ಲ ಎಂದಿದ್ದಾರೆ. ಬೆಟ್ಟದ ತುದಿ ತಲುಪಲು ಸುಸಜ್ಜಿತ ಮೆಟ್ಟಿಲುಗಳು ಇವೆ. ಬಸ್ ಹಾಗೂ ಇತರೆ ವಾಹನಗಳಿಗೆ ರಸ್ತೆಯಿದೆ. ಇದಲ್ಲದೇ ಇನ್ನೂ ಎರಡು ಕಡೆಗಳಿಂದ ಬೆಟ್ಟ ಹತ್ತಲು ಮಾರ್ಗಗಳಿವೆ. ಕೇವಲ ಅರ್ಧಗಂಟೆಯಲ್ಲಿ ಬೆಟ್ಟದ ತುದಿ ತಲುಪಬಹುದು. ಬೆಟ್ಟವನ್ನೇರಲು ಮಾರ್ಗ ಇರುವುದರಿಂದ ರೋಪ್‌ವೇ ಅನಗತ್ಯ ಎಂದು ತಿಳಿಸಿದ್ದಾರೆ.