ಮೈಸೂರು: ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ರಾಷ್ಟ್ರಪತಿ ರಸ್ತೆಯಲ್ಲಿ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಬಸ್ಗೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸಾವನ್ನಪ್ಪಿದ್ದಾರೆ.
ಮೊಲದ ಪ್ರಕರಣದಲ್ಲಿ ತ್ಯಾಗರಾಜ ಕಾಲೋನಿಯ ಶ್ರೀನಿವಾಸ್ (21) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಸ್ನೇಹಿತರ ಜೊತೆ ಸೇರಿ ಟ್ಯೂಷನ್ ನಾಮಫಲಕ ತೆಗೆಯುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ತೀವ್ರ ಅಸ್ವಸ್ಥರಾಗಿ ಕೆಳಗೆ ಬಿದ್ದಿದ್ದಾರೆ.
ತಕ್ಷಣ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶ್ರೀನಿವಾಸ್ ಮೃತಪಟ್ಟಿದ್ದಾರೆ. ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.