ಕರ್ನಾಟಕ

karnataka

ETV Bharat / city

ಪ್ರತಿಭಟನೆ ವದಂತಿ: ಬುರ್ಖಾ ಧರಿಸಿ ಮೈಸೂರು ಡಿಸಿ ಕಚೇರಿ ಬಳಿ ಜಮಾಯಿಸಿದ ವಿದ್ಯಾರ್ಥಿನಿಯರು! - protest in mysore

ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಎಲ್ಲರ ಮೊಬೈಲ್‌ಗೆ ಮೆಸೇಜ್ ಬಂದಿದೆ. ಇದರಿಂದ ನೂರಾರು ಸಂಖ್ಯೆಯ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ್ದರು.

students who wear Burqa came to mysore dc office due to fake message
ಮೈಸೂರು ಡಿಸಿ ಕಚೇರಿ ಬಳಿ ಜಮಾಯಿಸಿದ ವಿದ್ಯಾರ್ಥಿನಿಯರು

By

Published : Feb 9, 2022, 8:05 PM IST

ಮೈಸೂರು: ಪ್ರತಿಭಟನೆ ವದಂತಿಯಿಂದಾಗಿ ನೂರಾರು ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಡಿಸಿ ಕಚೇರಿ ಬಳಿ ಜಮಾಯಿಸಿದ ವಿದ್ಯಾರ್ಥಿನಿಯರು

ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜ್ಯಾದ್ಯಂತ ಭುಗಿಲೆದ್ದಿದ್ದು, ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಮೊಬೈಲ್‌ಗೆ ಮೆಸೇಜ್ ಬಂದಿದೆ. ಇದರಿಂದ ನೂರಾರು ಸಂಖ್ಯೆಯ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ್ದರು.

ಇದನ್ನೂ ಓದಿ:ಬಿಜೆಪಿಯ ದ್ವೇಷದ ಅಜೆಂಡಾ ಧಿಕ್ಕರಿಸಿ ನಾವೆಲ್ಲ ಸ್ನೇಹಿತರಾಗಿ ಒಟ್ಟಿಗೆ ಸಾಗೋಣ: ರಾಜ್ಯದ ವಿದ್ಯಾರ್ಥಿಗಳಿಗೆ ಸುರ್ಜೆವಾಲಾ ಪತ್ರ

ಇಲ್ಲಿ ಪ್ರತಿಭಟನೆ ಇದೆ ಎಂದು ವಿದ್ಯಾರ್ಥಿಗಳು ತಮ್ಮ ಮೊಬೈಲ್​ಗೆ ಬಂದಿದ್ದ ಮೆಸೇಜ್ ತೋರಿಸಿದಾಗ, ಇದು ಫೇಕ್ ಮೆಸೇಜ್​, ನಾವು ಯಾರಿಗೂ ಪ್ರತಿಭಟನೆ ಮಾಡಲು ಅವಕಾಶ ನೀಡಲ್ಲ ಎಂದು ಪೊಲೀಸರು ತಿಳಿ ಹೇಳಿ ಕಳುಹಿಸಿದರು. ಹಿಜಾಬ್ ಹಾಗೂ ಕೇಸರಿ ಶಾಲಿನ ವಿವಾದದಿಂದಾಗಿ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.

ABOUT THE AUTHOR

...view details