ಮೈಸೂರು: ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆ ಘಟನೆ ನಡೆದು 28 ದಿನಗಳ ನಂತರ ಜಡ್ಜ್ ಮುಂದೆ ಹೇಳಿಕೆ ದಾಖಲಿಸಿದರು.
ಆಗಸ್ಟ್ 24 ರಂದು ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ನಂತರ ತೀವ್ರ ಆಘಾತಗೊಂಡಿದ್ದ ವಿದ್ಯಾರ್ಥಿನಿ ಯಾವುದೇ ಹೇಳಿಕೆ ಹಾಗೂ ದೂರು ನೀಡದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮುಂಬೈಗೆ ಹೋಗಿದ್ದರು.
ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಸ್ಥಳ ಇದೀಗ ಮೈಸೂರಿನ 3ನೇ ಜೆಎಂಎಫ್ಸಿ ಕೋರ್ಟ್ನ ನ್ಯಾಯಾಧೀಶರ ಮುಂದೆ ಹಾಜರಾದ ಸಂತ್ರಸ್ತೆ ಸಿಆರ್‌ಪಿಸಿ ಸೆಕ್ಷನ್ 164 ರ ಅಡಿ ಹೇಳಿಕೆ ದಾಖಲಿಸಿದ್ದಾರೆ. ಸಂಪೂರ್ಣ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಕೋರ್ಟ್ ಮುಚ್ಚಿದ ಲಕೋಟೆಯಲ್ಲಿ ಭದ್ರಪಡಿಸಿದೆ.
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲ ಆರೋಪಿಗಳನ್ನೂ ತಮಿಳುನಾಡಿನಲ್ಲಿ ಬಂಧಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ತಮ್ಮ ವಶಕ್ಕೆ ಪಡೆದು ತನಿಖೆ ನಡೆಸಿದ್ದರು. ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ:ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ, ಇಲ್ಲಿದೆ ಕಂಪ್ಲೀಟ್ ಸ್ಟೋರಿ