ಮೈಸೂರು: ಆನೆ ಮರಿ ಬೇಟೆಯಾಡಿದ ಹುಲಿಯೊಂದು ತಿನ್ನಲು ಎಳೆದುಕೊಂಡು ಹೋಗುತ್ತಿರುವ ದೃಶ್ಯವನ್ನು ಸಫಾರಿಗರು ಸೆರೆ ಹಿಡಿದಿದ್ದಾರೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಕಾಕನಕೋಟೆ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಸಫಾರಿಗೆ ತೆರಳಿದ್ದ ಪ್ರವಾಸಿಗರು ಈ ದೃಶ್ಯವನ್ನು ನೋಡಿದ್ದಾರೆ.
ಶುಕ್ರವಾರ ಬೆಳಗ್ಗೆ ಪ್ರವಾಸಿಗರು ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಕಾಕನಕೋಟೆ ಅರಣ್ಯ ಪ್ರದೇಶದಲ್ಲಿ ತೆರಳುತ್ತಿದ್ದರು. ಈ ವೇಳೆ ಹುಲಿಯೊಂದು ಆನೆ ಮರಿಯನ್ನು ಬೇಟೆಯಾಡಿ ಪೊದೆಯೊಳಗೆ ಎಳೆದೊಯ್ಯುತ್ತಿರುವ ದೃಶ್ಯ ಸೆರೆ ಹಿಡಿದಿದ್ದಾರೆ.