ಮೈಸೂರು: ರಾಜ್ಯಕ್ಕೂ ಆಕ್ಸಿಜನ್ ಕೊರತೆ ಎದುರಾಗಿದ್ದು, ಆಮ್ಲಜನಕ ಸಿಗದೇ ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಇಬ್ಬರು ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ.
ಆಕ್ಸಿಜನ್ ಸಿಗದೇ ಇಬ್ಬರು ಕೋವಿಡ್ ರೋಗಿಗಳು ಸಾವು ಹೆಬ್ಬನಕುಪ್ಪೆ ಗ್ರಾಮದ ಇಬ್ಬರು ವ್ಯಕ್ತಿಗಳು ಸೋಂಕಿಗೆ ತುತ್ತಾಗಿ ಹುಣಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಕ್ಸಿಜನ್ ಕೊರತೆಯಿಂದಾಗಿ ಇವರು ಇಂದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ:ಆಕ್ಸಿಜನ್ ಸಿಗದೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಸಾವು: ಕುಟುಂಬಸ್ಥರ ಆರೋಪ
ಮೃತದೇಹಗಳನ್ನು ಆಸ್ಪತ್ರೆಯ ಸಿಬ್ಬಂದಿ ಶವಾಗಾರಕ್ಕೆ ತೆಗೆದುಕೊಂಡು ಬಂದಿದ್ದು, ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ತಡವಾಗಿ ಬಂದ ಹಿನ್ನೆಲೆಯಲ್ಲಿ ಶಾಸಕ ಮಂಜುನಾಥ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇನ್ನು ಕೋಲಾರದ ಎಸ್.ಎನ್.ಆರ್ ಜಿಲ್ಲಾಸ್ಪತ್ರೆಯಲ್ಲಿ ಕಳೆದ ರಾತ್ರಿ ಆಕ್ಸಿಜನ್ ಇಲ್ಲದೆ ನಾಲ್ವರು ಮೃತಪಟ್ಟಿರುವ ಆರೋಪ ಕೂಡ ಕೇಳಿ ಬಂದಿದೆ.