ಮೈಸೂರು: ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ. ಬರ್ತ್ಡೇ ಪಾರ್ಟಿಗೆ ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಡಿಮಾಲಂಗಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಅಭಿಷೇಕ್ (21) ಹಾಗೂ ಅಂಕೇಶ್ (21) ಎಂದು ಗುರುತಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕಿನಕಹಳ್ಳಿ ಗ್ರಾಮದ ನಿವಾಸಿಗಳಾದ ಇವರಿಬ್ಬರು, ಚಾಮರಾಜನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.