ಮೈಸೂರು: ಸಮ್ಮಿಶ್ರ ಸರ್ಕಾರದ ಭ್ರಷ್ಟಾಚಾರ ಹಾಗೂ ದುರಾಡಳಿತದಿಂದ ಬೇಸರಗೊಂಡು 17 ಮಂದಿ ರಾಜೀನಾಮೆ ನೀಡಿ, ಚುನಾವಣೆಗೆ ಬಂದಿದ್ದಾರೆ. ಈ ಉಪಚುನಾವಣೆ ಸ್ವಾಭಿಮಾನದ ಚುನಾವಣೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
ಉಪಚುನಾವಣೆ ಸ್ವಾಭಿಮಾನದ ಚುನಾವಣೆ: ಸಚಿವ ಸೋಮಣ್ಣ - ಉಪಚುನಾವಣೆ ಬಗ್ಗೆ ಸಚಿವ ಸೋಮಣ್ಣ ಪ್ರತಿಕ್ರಿಯೆ
ಹುಣಸೂರು ಪಟ್ಟಣದಲ್ಲಿ ಉಪಚುನಾವಣೆ ಹಿನ್ನೆಲೆ ಬಿಜೆಪಿ ಕಚೇರಿ ಉದ್ಘಾಟಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ, ಮ್ಮಿಶ್ರ ಸರ್ಕಾರದ ಭ್ರಷ್ಟಾಚಾರ ಹಾಗೂ ದುರಾಡಳಿತದಿಂದ ಬೇಸರಗೊಂಡು 17ಮಂದಿ ರಾಜೀನಾಮೆ ನೀಡಿ, ಚುನಾವಣೆಗೆ ಬಂದಿದ್ದಾರೆ. ಈ ಉಪಚುನಾವಣೆ ಸ್ವಾಭಿಮಾನದ ಚುನಾವಣೆ ಎಂದು ಹೇಳಿದರು.
ಹುಣಸೂರು ಪಟ್ಟಣದಲ್ಲಿ ಉಪಚುನಾವಣೆ ಹಿನ್ನೆಲೆ ಬಿಜೆಪಿ ಕಚೇರಿ ಉದ್ಘಾಟಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಶ್ವನಾಥ್ ಅವರು ಕಾಂಗ್ರೆಸ್ ಸರ್ಕಾರದಲ್ಲಿಯೂ ಮಂತ್ರಿಗಳಾಗಿದ್ದವರು. ಆಗ ಸರ್ಕಾರ ತಪ್ಪು ಮಾಡಿದರೂ ಎಚ್ಚರಿಸಿ ಸರಿದಾಗಿಗೆ ತರುತ್ತಿದ್ದರು.ಅವರ ಸ್ವಾಭಿಮಾನಕ್ಕೆ ಸಮ್ಮಿಶ್ರ ಸರ್ಕಾರದಲ್ಲಿ ಗೌರವ ನೀಡದ ಕಾರಣ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದಿದ್ದಾರೆ. ಅವರನ್ನು ಗೆಲ್ಲಿಸಿದರೆ ಮಂತ್ರಿಗಳಾಗುತ್ತಾರೆ, ಸರ್ಕಾರ ಮೂರುವರೆ ವರ್ಷ ಸುಭದ್ರವಾಗಿರುತ್ತದೆ ಎಂದರು.
ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಪ್ರಧಾನಿ ಹಾಗೂ ಮುಖ್ಯಮಂತ್ರಿ ಅವರು ಒಂದೇ ನಾಣ್ಯದ ಎರಡು ಮುಖಗಳಂತೆ ಕೆಲಸ ಮಾಡುತ್ತಿದ್ದಾರೆ. ಚುನಾವಣೆ ನಂತರವು ಹೀಗೆ ಅಭಿವೃದ್ಧಿ ಮುಂದುವರಿಯಲಿದೆ. ನಾವು ಉಪಚುನಾವಣೆ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.