ಕರ್ನಾಟಕ

karnataka

ETV Bharat / city

ಚುನಾವಣೆಯಲ್ಲಿ ಭ್ರಷ್ಟಾಚಾರ ತಡೆಯುವಂತೆ ವಾಟಾಳ್ ನಾಗರಾಜ್ ಆಗ್ರಹ - ಚುನಾವಣೆಯಲ್ಲಿ ಭ್ರಷ್ಟಾಚಾರ ತಡೆಯುವಂತೆ ಒತ್ತಾಯ

ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ಯಾರಿಗೂ ಹಣ ನೀಡುವುದಿಲ್ಲ. ಮತದಾರರು ನನಗೆ ಆಶೀರ್ವಾದ ಮಾಡಿ ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದರು..

Vatal Nagaraj
ವಾಟಾಳ್ ನಾಗರಾಜ್

By

Published : Dec 5, 2021, 4:37 PM IST

ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಭ್ರಷ್ಟಾಚಾರ ತಡೆಯುವಂತೆ ಒತ್ತಾಯಿಸಿ ವಿಧಾನ ಪರಿಷತ್ ಚುನಾವಣೆಯ ಪಕ್ಷೇತರ ಅಭ್ಯರ್ಥಿ, ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿಭಟಿಸಿದರು.

ಪರಿಷತ್ ಚುನಾವಣೆಯಲ್ಲಿ ಭ್ರಷ್ಟಾಚಾರ ತಡೆಯುವಂತೆ ವಾಟಾಳ್ ನಾಗರಾಜ್ ಆಗ್ರಹಿಸಿರುವುದು..

ನಗರದ ಹಾರ್ಡಿಂಗ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಿಷತ್ ಚುನಾವಣೆಯಲ್ಲಿ ಮೂರು ರಾಜಕೀಯ ಪಕ್ಷಗಳಿಂದ ಭ್ರಷ್ಟಾಚಾರ ಮಾಡಲಾಗುತ್ತಿದೆ. ಈ ಬಗ್ಗೆ ಚುನಾವಣಾ ಆಯೋಗ ತಕ್ಷಣವೇ ಕ್ರಮವಹಿಸುವಂತೆ ಅವರು ಒತ್ತಾಯಿಸಿದರು.

ಚುನಾವಣೆ ಆಯೋಗ ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಮೇಲ್ಮನೆ ಹಣವಂತರ ಪಾಲಾಗುತ್ತಿದೆ. ಮೂರು ರಾಜಕೀಯ ಪಕ್ಷಗಳು ಒಂದು ಮತ ಕೇಳುವುದು ಸಂವಿಧಾನ ವಿರೋಧಿ. ನಾನು ಯಾರಿಗೂ ಹಣ ನೀಡುವುದಿಲ್ಲ. ಮತದಾರರು ನನಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ಇದನ್ನೂ ಓದಿ:ನಾನೊಬ್ಬ ಗೆದ್ದರೆ 75 ಪರಿಷತ್ ಸದಸ್ಯರು, 224 ವಿಧಾನಸಭಾ ಸದಸ್ಯರಿಗೆ ಸಮ: ವಾಟಾಳ್ ನಾಗರಾಜ್​

ABOUT THE AUTHOR

...view details