ಮೈಸೂರು: ಪದವೀಧರ ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರ 10,000 ರೂ. ನಿರುದ್ಯೋಗ ಭತ್ಯೆ ನೀಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದರು.
ಮೈಸೂರಿನ ಹಾರ್ಡಿಂಗ್ ವೃತ್ತದ ಬಳಿ ಪ್ರತಿಭಟನೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಖಾಸಗಿ ಕಂಪನಿಗಳು ಕನ್ನಡಿಗರನ್ನು ಕಡೆಗಣಿಸಿ ಬೇರೆ ಬೇರೆ ರಾಜ್ಯದ ಯುವಕರನ್ನು ಕೆಲಸಕ್ಕೆ ತೆಗೆದುಕೊಳ್ಳುತ್ತಿರುವುದರಿಂದ, ಕನ್ನಡದ ಯುವಕರಿಗೆ ಅನ್ಯಾಯವಾಗುತ್ತಿದೆ. ಪದವೀಧರರಾಗಿದ್ದರೂ ನಮ್ಮ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಸರ್ಕಾರ ಕೂಡ ವಿದ್ಯಾವಂತರನ್ನು ಕಡೆಗಣಿಸಿದೆ ಎಂದು ಕಿಡಿಕಾರಿದರು.