ಮೈಸೂರು:ಆಗಸ್ಟ್ 8 ರಿಂದ ಪ್ರತಿ ಶನಿವಾರ, ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳನ್ನು ಒಳಗೊಂಡಂತೆ ಎಲ್ಲ ದಿನಗಳಂದು ಪ್ರವಾಸಿಗರಿಗೆ ಅರಮನೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅರಮನೆ ಮಂಡಳಿ ಉಪನಿರ್ದೇಶಕ ತಿಳಿಸಿದ್ದಾರೆ.
ಪ್ರವಾಸಿಗರ ವೀಕ್ಷಣೆಗೆ ವಿಶ್ವವಿಖ್ಯಾತ ಮೈಸೂರು ಅರಮನೆ ಮುಕ್ತ - ಮೈಸೂರು ಸುದ್ದಿ
ಪ್ರತಿ ಶನಿವಾರ, ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳನ್ನು ಒಳಗೊಂಡಂತೆ ಎಲ್ಲ ದಿನಗಳಂದು ಪ್ರವಾಸಿಗರಿಗೆ ಮೈಸೂರು ಅರಮನೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ತಿಳಿಸಿದ್ದಾರೆ.
![ಪ್ರವಾಸಿಗರ ವೀಕ್ಷಣೆಗೆ ವಿಶ್ವವಿಖ್ಯಾತ ಮೈಸೂರು ಅರಮನೆ ಮುಕ್ತ](https://etvbharatimages.akamaized.net/breaking/breaking_1200.png)
Breaking News
ಪ್ರವಾಸಿಗರ ವೀಕ್ಷಣೆಗೆ ವಿಶ್ವವಿಖ್ಯಾತ ಮೈಸೂರು ಅರಮನೆ ಮುಕ್ತ
ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ಪ್ರವಾಸಿಗರಿಗೆ ಅರಮನೆ ಮುಕ್ತವಾಗಿದ್ದು, ಅರಮನೆ ಆವರಣದಲ್ಲಿ ಸಂಜೆ ನಡೆಯುವ 'ಧ್ವನಿ ಮತ್ತು ಬೆಳಕು' ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿರುತ್ತದೆ.
ಪ್ರತಿ ಭಾನುವಾರದಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯನ್ನು ಸಹ ತಾತ್ಕಾಲಿಕವಾಗಿ ರದ್ದು ರದ್ದು ಪಡಿಸಲಾಗಿದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.