ಮೈಸೂರು: ಪಠ್ಯ ಪುಸ್ತಕದಲ್ಲಿ ಟಿಪ್ಪು ಸುಲ್ತಾನ್ ವಿಚಾರವನ್ನು ತೆಗೆದುಹಾಕುವ ಕುರಿತು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಇದಕ್ಕೆ ಸಂಸದ ಪ್ರತಾಪ್ ಸಿಂಹ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಂಸದ ಪ್ರತಾಪ್ ಸಿಂಹ ಮಾತನಾಡಿ, ಟಿಪ್ಪು ಸುಲ್ತಾನ್ ಇತಿಹಾಸವನ್ನು ಮುಂದಿನ ತಲೆಮಾರಿಗೆ ಹೇಳಿಕೊಡಬಾರದು ಎನ್ನುವ ಸಿಎಂ ಯಡಿಯೂರಪ್ಪ ನಿರ್ಧಾರವನ್ನು ನಾಡಿನ ಎಲ್ಲಾ ಕನ್ನಡಿಗರ ಪರವಾಗಿ ನಾನು ಅಭಿನಂದಿಸುತ್ತೇನೆ. ಯಡಿಯೂರಪ್ಪ ಕೈಗೊಂಡಿರುವ ನಿರ್ಧಾರವನ್ನು ಕನ್ನಡವನ್ನು ಪ್ರೀತಿಸುವಂತಹ, ಕನ್ನಡದ ನೆಲದ ಬಗ್ಗೆ ಅಭಿಮಾನ ಹೊಂದಿರುವ ಎಲ್ಲರೂ ಸ್ವಾಗತಿಸಬೇಕಾಗುತ್ತದೆ. ನಾನೊಬ್ಬ ಕನ್ನಡಿಗನಾಗಿ ಯಡಿಯೂರಪ್ಪ ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.