ಮೈಸೂರು :ಹಾನಗಲ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅಭೂತಪೂರ್ವ ಗೆಲುವು ಸಿಕ್ಕಿದೆ. ಸಿಂದಗಿಯಲ್ಲಿ ಕಾಂಗ್ರೆಸ್ ಸೋತು ಗೆದ್ದಿದೆ ಎಂದು ಕಾಂಗ್ರೆಸ್ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಂದಗಿ, ಹಾನಗಲ್ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಹಾನಗಲ್ನಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ.
ಬೈ ಎಲೆಕ್ಷನ್ ಕುರಿತಂತೆ ವರುಣಾ ಕಾಂಗ್ರೆಸ್ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿರುವುದು.. ಸಿಂದಗಿಯಲ್ಲಿ ಕಳೆದ ಬಾರಿ ಕಾಂಗ್ರೆಸ್ ಪಕ್ಷ ಮೂರನೇ ಸ್ಥಾನಕ್ಕೆ ಬಂದಿತ್ತು. ಅಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಿತ್ತು. ಆದರೆ, ಈ ಬಾರಿ ಮೂರನೇ ಸ್ಥಾನದಲ್ಲಿದ್ದ ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನಕ್ಕೆ ಬಂದಿದೆ ಎಂದರು.
ಹಾನಗಲ್ ಕ್ಷೇತ್ರದ ಮತದಾರರು ಸಹ ಬದಲಾವಣೆ ಬಯಸಿದ್ದಾರೆ. ಮುಂದಿನ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆಯ ಒಲವು ವ್ಯಕ್ತಪಡಿಸಿದ್ದಾರೆ. ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಹಗಲು-ರಾತ್ರಿ ಎನ್ನದೆ ಶ್ರಮವಹಿಸಿದ್ದಾರೆ. ಈ ಗೆಲುವಿನ ಕೀರ್ತಿ ಕ್ಷೇತ್ರದ ಜನತೆಗೆ, ಕಾರ್ಯಕರ್ತರಿಗೆ ಸಲ್ಲಬೇಕು ಎಂದರು.
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳಿಂದ ಜನತೆ ಬದಲಾವಣೆ ಬಯಸಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.