ಮೈಸೂರು:ಚಲಿಸುತ್ತಿದ್ದ ರೈಲಿನಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರಿನ ವಿಜಯನಗರ ಬಡಾವಣೆ ನಿವಾಸಿ ಅರುಣ್ (26) ಮೃತ ಯುವಕ. ಚಾಮರಾಜನಗರದಿಂದ ಮೈಸೂರಿಗೆ ಬರುತ್ತಿದ್ದ ರೈಲ್ವೆ ಬೋಗಿಯಲ್ಲಿ ಪ್ರಯಾಣಿಕರಿಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸಾಲ ಹೊರೆಯೇ ಘಟನೆಗೆ ಖಾರಣ ಎನ್ನಲಾಗುತ್ತಿದೆ. ರೈಲ್ವೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಚಲಿಸುತ್ತಿದ್ದ ರೈಲಿನಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ - ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಚಲಿಸುತ್ತಿದ್ದ ರೈಲಿನಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸಾಂದರ್ಭಿಕ ಚಿತ್ರ