ಮೈಸೂರು:ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನ ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ.
ತಿ.ನರಸೀಪುರ ತಾಲೂಕಿನ ಹೆಮ್ಮಿಗೆ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನ ಕಂಡ ಮೀನು ಹಿಡಿಯುತ್ತಿದ್ದ ಯುವಕರು ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಮೈಸೂರಿನಲ್ಲಿ ಸೇತುವೆಯಿಂದ ನದಿಗೆ ಹಾರಿದ ಯುವತಿಯ ರಕ್ಷಣೆ..ವೈರಲ್ ವಿಡಿಯೋ ದೋಣಿ ಸವಾರರು (ಮೀನು ಹಿಡಿಯುತ್ತಿದ್ದ ಯುವಕರು) ಯುವತಿಯನ್ನ ತೆಪ್ಪದಲ್ಲಿ ಹಾಕಿಕೊಂಡು ದಡ ಸೇರಿಸಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಲ್ಲದೇ ಯುವಕರ ಸಮಯ ಪ್ರಜ್ಞೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗ್ತಿದೆ.
ಇದನ್ನೂ ಓದಿ:ಮುಂಬೈನ 15 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ: ಇಬ್ಬರು ಸಾವು