ಕರ್ನಾಟಕ

karnataka

ETV Bharat / city

ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ ನಿರ್ಮಾಣಕ್ಕೆ 100 ಕೋಟಿ ಅನುದಾನ - 100 crore grant for Shimoga-Shikaripura-Ranebennur railway line

2021-22ನೇ ಸಾಲಿನ ಕೇಂದ್ರ ಮುಂಗಡ ಪತ್ರದಲ್ಲಿ ಉತ್ತರ ಕರ್ನಾಟಕಕ್ಕೆ ಸಂಪರ್ಕ ಬೆಸೆಯುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ನಿರ್ಮಾಣಕ್ಕಾಗಿ 100 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಸಂಸದ ಬಿ.ವೈ.ರಾಘವೇಂದ್ರ
ಸಂಸದ ಬಿ.ವೈ.ರಾಘವೇಂದ್ರ

By

Published : Feb 5, 2021, 7:28 PM IST

ಶಿವಮೊಗ್ಗ: ಉತ್ತರ ಕರ್ನಾಟಕಕ್ಕೆ ಸಂಪರ್ಕ ಬೆಸೆಯುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ನಿರ್ಮಾಣಕ್ಕಾಗಿ 2021-22ನೇ ಸಾಲಿನ ಕೇಂದ್ರ ಮುಂಗಡ ಪತ್ರದಲ್ಲಿ 100 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಭಾಗದ ಜನರ ಬಹು ದಿನಗಳ ಕನಸಾಗಿರುವ ಈ ರೈಲು ಮಾರ್ಗದ ನಿರ್ಮಾಣ ಕಾರ್ಯಕ್ಕೆ ಅಗತ್ಯವಾಗಿರುವ ಭೂಮಿಯನ್ನು ಕೆಐಡಿಬಿ ಸಂಸ್ಥೆಯ ಮೂಲಕ ಸ್ವಾಧೀನ ಮಾಡಿಕೊಳ್ಳುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

ರೈಲು ಮಾರ್ಗ ನಿರ್ಮಾಣ ಸಂಬಂಧ ಕೇಂದ್ರ ರೈಲ್ವೆ ಸಚಿವರನ್ನು ಸಂಪರ್ಕಿಸಿ, ಸಮಾಲೋಚನೆ ನಡೆಸಲಾಗಿತ್ತು ಎಂದು ತಿಳಿಸಿರುವ ಅವರು, 2019-20ರ ಕೇಂದ್ರ ಮುಂಗಡ ಪತ್ರದಲ್ಲಿ ಶಿವಮೊಗ್ಗ ಭಾಗದಲ್ಲಿ ರೈಲು ಸಂಚಾರ ಹೆಚ್ಚಿಸಲು ಮೂಲ ಅಗತ್ಯವೆನಿಸಿರುವ ಕೋಚಿಂಗ್ ಡಿಪೋವನ್ನು ಶಿವಮೊಗ್ಗ ಸಮೀಪದ ಕೋಟೆಗಂಗೂರಿನಲ್ಲಿ ನಿರ್ಮಿಸಲು ಅಗತ್ಯ ಅನುದಾನ ಮಂಜೂರಾಗಿದೆ. ಅಲ್ಲದೆ ಇದಕ್ಕೆ ಬೇಕಾಗಿರುವ ಹೆಚ್ಚುವರಿ ಭೂಮಿಯನ್ನು ಖಾಸಗಿಯವರಿಂದ ಭೂ ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ಚಾಲ್ತಿಯಲಿದೆ. ರೈಲ್ವೆ ಇಲಾಖೆಯು ಆರಂಭಿಕ ಕಾಮಗಾರಿ ಅನುಷ್ಠಾನಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದೆ. ಅದಕ್ಕಾಗಿ ಮುಂಗಡ ಪತ್ರದಲ್ಲಿ 12 ಕೋಟಿ ರೂ.ಗಳನ್ನು ಮೀಸಲಿರಿಸಿದೆ ಎಂದು ತಿಳಿಸಿದ್ದಾರೆ.

ಇನ್ನು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ರೈಲ್ವೆ ಮೂಲ ಸೌಲಭ್ಯ ಅಭಿವೃದ್ಧಿಪಡಿಸುವುದು ಅಗತ್ಯ. ಈ ಅನುದಾನ ತರುವಲ್ಲಿ ಶ್ರಮಿಸಿದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಅಭಿನಂದಿಸಿದ್ದಾರೆ.

ABOUT THE AUTHOR

...view details