ಶಿವಮೊಗ್ಗ:ಜಿಲ್ಲೆಯಲ್ಲಿಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಅಕ್ರಮ ಮರಳು ಸಾಗಾಟ, ಜೂಜಾಟ, ಮಟ್ಕಾ ಚಟುವಟಿಕೆಗಳನ್ನು ನಿಗ್ರಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು ತಿಳಿಸಿದ್ದಾರೆ.
ಅಕ್ರಮ ಚಟುವಟಿಕೆ ವಿರುದ್ಧ 150 ಪ್ರಕರಣ ದಾಖಲು: ಶಿವಮೊಗ್ಗ ಎಸ್ಪಿ - illegal activities
ಅಕ್ರಮ ಮರಳು ಸಾಗಾಟ, ಜೂಜಾಟ, ಮಟ್ಕಾ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್ಪಿ ಶಾಂತರಾಜು ತಿಳಿಸಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು
ಈ ಅವಧಿಯಲ್ಲಿ 26 ಗಾಂಜಾ ಮಾರಾಟ ಪ್ರಕರಣಗಳು ದಾಖಲಿಸಿ 138 ಕೆಜಿ ಹಸಿ ಗಾಂಜಾ ಮತ್ತು 11 ಕೆಜಿ ಒಣ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಮರಳು ಸಾಗಾಣಿಕೆ ಸಂಬಂಧ 8 ಪ್ರಕರಣಗಳನ್ನು ದಾಖಲಿಸಲಾಗಿದೆ. ₹ 66 ಸಾವಿರ ಮೌಲ್ಯದ ಸೊತ್ತು ಜಪ್ತಿ ಮಾಡಲಾಗಿದೆ ಎಂದರು.
41 ಜೂಜಾಟ ಪ್ರಕರಣಗಳನ್ನು ದಾಖಲಿಸಿಕೊಂಡು ₹ 4 ಲಕ್ಷ ನಗದು, 48 ಬೈಕ್ ಹಾಗೂ 10 ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ. ಮಟ್ಕಾ ಸಂಬಂಧ 75 ಪ್ರಕರಣಗಳಲ್ಲಿ ₹ 1.70 ಲಕ್ಷ ನಗದು ಹಾಗೂ 5 ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.