ಶಿವಮೊಗ್ಗ:ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪರಸ್ಪರ ಹೊಡೆದಾಡಿಕೊಂಡು ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಹೊರವಲಯದ ಸೂಳೆಬೈಲು ಶಾಂತಿನಗರ 7ನೇ ಕ್ರಾಸ್ನಲ್ಲಿ ಈ ಘಟನೆ ನಡೆದಿದೆ.
ಸಲೀಮ್ ಅಹಮದ್(22) ಹಾಗೂ ಅಬ್ದುಲ್ ದಸ್ತಗಿರಿ(23) ಮೃತಪಟ್ಟವರೆಂದು ಗುರುತಿಸಲಾಗಿದೆ. ಕೌಟುಂಬಿಕ ವೈಷಮ್ಯಕ್ಕೆ ಸಂಬಂಧಿಸಿದಂತೆ ನಿನ್ನೆ ತಡರಾತ್ರಿ ಇಬ್ಬರ ನಡುವೆ ಗಲಾಟೆ ಆರಂಭವಾಗಿತ್ತು. ಬಳಿಕ ಇಬ್ಬರೂ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದರು. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಇಬ್ಬರೂ ಮೃತಪಟ್ಟಿದ್ದಾರೆ.