ಶಿವಮೊಗ್ಗ:ಜನತಾ ಕರ್ಫ್ಯೂ ನಿಯಮವನ್ನು ಉಲ್ಲಂಘಿಸಿದ 235 ವಾಹನ ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ 247 ದ್ವಿಚಕ್ರ ವಾಹನಗಳು, 39 ಕಾರುಗಳು ಹಾಗು 9 ಆಟೋಗಳು ಸೇರಿ 295 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಐಎಂವಿ ಕಾಯ್ದೆ ಅಡಿಯಲ್ಲಿ ಒಟ್ಟು 235 ಪ್ರಕರಣಗಳನ್ನು ದಾಖಲಿಸಿ, 1,49,100 ರೂ. ದಂಡ ವಸೂಲಿ ಮಾಡಲಾಗಿದೆ.