ಶಿವಮೊಗ್ಗ: ಕೊರೊನಾ ನಿಯಮ ಉಲ್ಲಂಘನೆ ಮಾಡಿ ಅನಗತ್ಯವಾಗಿ ಓಡಾಡುತ್ತಿದ್ದ 238 ದ್ವಿಚಕ್ರ ವಾಹನ, 04 ಆಟೋ ಹಾಗು 24 ಕಾರುಗಳು ಸೇರಿ ಒಟ್ಟು 266 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಲಾಕ್ಡೌನ್ ನಿಯಮ ಉಲ್ಲಂಘಿಸಿದ 266 ವಾಹನಗಳು ಜಪ್ತಿ - ಲಾಕ್ಡೌನ್ ನಿಯಮ ಉಲ್ಲಂಘನೆ
ಶಿವಮೊಗ್ಗದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದ ಇನ್ನೂರಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದು, 1,51,300 ರೂ. ದಂಡ ವಸೂಲಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ 266 ವಾಹನ ಜಪ್ತಿ
ಇದ್ರ ಜೊತೆಗೆ, ನಿಯಮ ಮೀರಿದ ಅಂಗಡಿಯ ಮಾಲೀಕರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ- 2020ರ ಅಡಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ. ಒಟ್ಟು 1,51,300 ರೂ. ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:NEET ಮುಂದೂಡದಂತೆ ಕೋರಿ ಹೈಕೋರ್ಟ್ಗೆ ಪಿಐಎಲ್ : ಮೇ 27ಕ್ಕೆ ವಿಚಾರಣೆ