ಶಿವಮೊಗ್ಗ: ಆಧಾರ ರಕ್ತದಾನಿಗಳ ಸೇವಾ ಟ್ರಸ್ಟ್ನ 9ನೇ ವಾರ್ಷಿಕೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಜನವರಿ 19 ರ ಬೆಳಿಗ್ಗೆ 10.30 ಕ್ಕೆ ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಗೌರವ ಅಧ್ಯಕ್ಷ ಪ್ರಹ್ಲಾದ್ ಶಾಸ್ತ್ರಿ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಧಾರ ರಕ್ತದಾನಿಗಳ ಸೇವಾ ಟ್ರಸ್ಟ್ ಯಶಸ್ವಿಯಾಗಿ 8 ವರ್ಷ ಪೂರೈಸಿದೆ. ಸಂಸ್ಥೆಯ ಸದಸ್ಯರಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಸ್ವಯಂಪ್ರೇರಿತ ನಿರಂತರ ರಕ್ತದಾನ, ಸೇರಿದಂತೆ ಗ್ರಾಮೀಣ ಭಾಗದಲ್ಲಿ ರಕ್ತದಾನದ ಜಾಗೃತಿ ಜಾಥಾ, ಅರಿವು ಹಾಗೂ ರಕ್ತದಾನ ಶಿಬಿರ, ನಾಟಕ ಪ್ರದರ್ಶನ ಸೇರಿ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದು, ಇಲ್ಲಿಯವರೆ 6000 ಕ್ಕೂ ಹೆಚ್ಚು ಯೂನಿಟ್ ರಕ್ತ ಸಂಗ್ರಹಣೆ ಮಾಡಿದ್ದೆವೆ ಎಂದು ಪ್ರಹ್ಲಾದ್ ಶಾಸ್ತ್ರಿ ತಿಳಿಸಿದರು.