ಶಿವಮೊಗ್ಗ:ರಾಜ್ಯದಲ್ಲಿ ಲಕ್ಷಾಂತರ ಮಕ್ಕಳಿಗೆ ವಿದ್ಯೆ ನೀಡುವ ಆದಿಚುಂಚನಗಿರಿ ಮಹಾಸಂಸ್ಥಾನವು ಭಾರತದ ಸಂಸ್ಕೃತಿ ಹಾಗೂ ಪರಂಪರೆಯನ್ನು ಎತ್ತಿ ಹಿಡಿಯುವಲ್ಲಿ, ಉಳಿಸಿ ಬೆಳೆಸುವಲ್ಲಿ ತನ್ನದೇ ಆದ ವಿಶೇಷ ಕೊಡುಗೆ ನೀಡುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಭಾರತದ ಸಂಸ್ಕೃತಿ, ಪರಂಪರೆ ಉಳಿಸಿ-ಬೆಳೆಸುತ್ತಿರುವ ಆದಿಚುಂಚನಗಿರಿ ಮಹಾಸಂಸ್ಥಾನ: ಈಶ್ವರಪ್ಪ
ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಕ್ರೀಡಾ ದಿನಾಚರಣೆ, ರಾಷ್ಟ್ರಮಟ್ಟದ ಕ್ರೀಡಾಪಟುಗಳಿಗೆ ಪುರಸ್ಕಾರ ಹಾಗೂ ಮಕ್ಕಳ ಸಾಂಸ್ಕೃತಿಕ ಜಗತ್ತಿನ ಅನಾವರಣ ಸಮಾರಂಭ ನಡೆಯಿತು.
ಕೆ.ಎಸ್.ಈಶ್ವರಪ್ಪ
ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕ್ರೀಡಾ ದಿನಾಚರಣೆ, ರಾಷ್ಟ್ರಮಟ್ಟದ ಕ್ರೀಡಾಪಟುಗಳಿಗೆ ಪುರಸ್ಕಾರ ಹಾಗೂ ಮಕ್ಕಳ ಸಾಂಸ್ಕೃತಿಕ ಜಗತ್ತಿನ ಅನಾವರಣ ಸಮಾರಂಭದಲ್ಲಿ ಅವರು ಮಾತನಾಡಿದರು.
ಮಕ್ಕಳ ಪಥಸಂಚಲನದಲ್ಲಿ ನಾಡಿನ ಹಿರಿಯ ಸಾಹಿತಿಗಳನ್ನು ಗುರುತಿಸಿ ಗೌರವಿಸುವಂತೆ ಮಾಡಿರುವುದು ವಿಶೇಷ ಎಂದರು. ಮಹಾಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ, ಉಪಮೇಯರ್ ಚನ್ನಬಸಪ್ಪ, ಶಿವಮೊಗ್ಗ ಡಿಡಿಪಿಐ ಮಂಜುನಾಥ್, ವಿದ್ಯಾಸಂಸ್ಥೆಯ ಹಿರಿಯಣ್ಣ ಹೆಗಡೆ, ರವೀಶ್, ರಮೇಶ್, ಪ್ರಾಂಶುಪಾಲ ಗುರುರಾಜ್, ಉಪಪ್ರಾಂಶುಪಾಲೆ ನಂದರಾವ್, ಮುಖ್ಯ ಶಿಕ್ಷಕ ಆದರ್ಶ ಇದ್ದರು.