ಶಿವಮೊಗ್ಗ: ಜನವರಿ17ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭದ್ರಾವತಿಗೆ ಭೇಟಿ ನೀಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಜ.17 ಕ್ಕೆ ಭದ್ರಾವತಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ
ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳ ಆರ್ಎಎಫ್ ಕೇಂದ್ರವನ್ನು ಶಿವಮೊಗ್ಗದ ಜಿಲ್ಲೆಯ ಭದ್ರಾವತಿ ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಪ್ರಾರಂಭಿಸುತ್ತಿರುವ ಹಿನ್ನೆಲೆ ಗುದ್ದಲಿ ಪೂಜೆ ನೆರವೇರಿಸುವುದಕ್ಕಾಗಿ ಜನವರಿ17ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭದ್ರಾವತಿಗೆ ಭೇಟಿ ನೀಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳ ಆರ್ಎಎಫ್ ಕೇಂದ್ರವನ್ನು ಶಿವಮೊಗ್ಗದ ಜಿಲ್ಲೆಯ ಭದ್ರಾವತಿ ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಪ್ರಾರಂಭಿಸಲಾಗುತ್ತಿದೆ. ಈ ಹಿನ್ನೆಲೆ ಗುದ್ದಲಿ ಪೂಜೆ ನೆರವೇರಿಸುವ ಉದ್ದೇಶದಿಂದ ಅಮಿತ್ ಶಾ ಆಗಮಿಸಲಿದ್ದು, ಅಂದು ಬೆಳಗ್ಗೆ 11 ಗಂಟೆಗೆ ಅಗಮಿಸಿ ಗುದ್ದಲಿ ಪೂಜೆ ನಡೆಸಿ, ನಂತರ ಹೊಸಪೇಟೆಗೆ ತೆರಳಿದ್ದಾರೆ ಎಂದು ಇಂದು ಸ್ಥಳ ಪರಿಶೀಲನೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಈ ವೇಳೆ ಡಿಸಿ ಕೆ.ಬಿ.ಶಿವಕುಮಾರ್, ಎಸ್ಪಿ ಶಾಂತರಾಜು, ಭದ್ರಾವತಿ ಡಿವೈಎಸ್ಪಿ ಕೃಷ್ಣಮೂರ್ತಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಆರ್ಎಎಫ್ನ ಮುಖ್ಯಸ್ಥರು ಹಾಜರಿದ್ದರು.