ಶಿವಮೊಗ್ಗ:ಜಿಲ್ಲೆಯಲ್ಲಿ ಮತ್ತೆ ಮೂರು ಕೊರೊನಾ ಕೇಸ್ಗಳು ಕಂಡುಬಂದಿದ್ದು, ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮತ್ತೆ ಮೂವರಿಗೆ ಕೊರೊನಾ... ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆ - ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಮಲೆನಾಡು ಹೆಬ್ಬಾಗಿಲು ಶಿವಮೊಗ್ಗಕ್ಕೆ ಕಳೆದ ಎರಡು ದಿನಗಳ ಹಿಂದೆ ಮಹಾರಾಷ್ಟ್ರದ ಮುಂಬೈನಿಂದ ಬಂದಿದ್ದ ಮೂವರಲ್ಲಿ ಕೊರೊನಾ ಸೋಂಕು ಕಂಡುಬಂದಿದೆ. ಇದರಿಂದ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.
ಸಾಗರ ತಾಲೂಕಿನ 38 ವರ್ಷದ ಮಹಿಳೆ, ಹೊಸನಗರ ತಾಲೂಕಿನ 42 ವರ್ಷದ ಅಪ್ಪ ಮತ್ತು 4 ವರ್ಷದ ಮಗಳಿಗೆ ಸೋಂಕು ತಗುಲಿದೆ. ಸೋಂಕಿತರು ಕಳೆದ ಎರಡು ದಿನಗಳ ಹಿಂದೆ ಮಹಾರಾಷ್ಟ್ರದ ಮುಂಬೈನಿಂದ ಜಿಲ್ಲೆಗೆ ಆಗಮಿಸಿದ್ದು, ಕ್ವಾರಂಟೈನ್ನಲ್ಲಿದ್ದರು. ಸದ್ಯ, ಇವರಿಗೆ ಮೆಗ್ಗಾನ್ ಆಸ್ಪತ್ರೆಯ ಕೋವಿಡ್-19 ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು, ಜಿಲ್ಲೆಯಲ್ಲಿ ಈವರೆಗೂ 3,400 ಜನರ ಸ್ವಾಬ್ ಪರೀಕ್ಷೆಗೆ ತೆಗೆದುಕೊಳ್ಳಲಾಗಿತ್ತು. ಇದರಲ್ಲಿ 340 ಜನರ ವರದಿ ಬಂದಿದ್ದು, ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 12 ಜನರನ್ನ ಸಹ ಕ್ವಾರಂಟೈನ್ ಮಾಡಲಾಗಿದೆ. ದ್ವಿತೀಯ ಸಂಪರ್ಕದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.