ಶಿವಮೊಗ್ಗ: ತವರು ಜಿಲ್ಲೆಯ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಮತ್ತು ಸಾಗರ ಕ್ಷೇತ್ರದ ಹರತಾಳು ಹಾಲಪ್ಪ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಸಿಎಂ ತವರು ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ - ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಮತ್ತು ಸಾಗರ ಕ್ಷೇತ್ರದ ಹರತಾಳು ಹಾಲಪ್ಪ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಯೊಂದಿಗೆ ಶಾಸಕರು
ಆರಗ ಜ್ಞಾನೇಂದ್ರ ಅವರಿಗೆ ಗೃಹ ಮಂಡಳಿ ಅಧ್ಯಕ್ಷ ಸ್ಥಾನ ಮತ್ತು ಹರತಾಳು ಹಾಲಪ್ಪ ಅವರಿಗೆ ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ (ಎಂಎಸ್‌ಐಎಲ್) ಅಧ್ಯಕ್ಷ ಸ್ಥಾನವನ್ನು ನೀಡಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿಗಮ ಮಂಡಳಿಯಲ್ಲಿ ಸ್ಥಾನಮಾನ ಕಲ್ಪಿಸಿ ಸಮಾಧಾನ ಮಾಡಿದ್ದಾರೆ ಎನ್ನಲಾಗಿದೆ.