ಕರ್ನಾಟಕ

karnataka

ETV Bharat / city

ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷನ ಮೇಲೆ ಮಾರಣಾಂತಿಕ ಹಲ್ಲೆ ಆರೋಪ - ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷನ ಮೇಲೆ ಮಾರಣಾಂತಿಕ ಹಲ್ಲೆ ಆರೋಪ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Assault on former vice-president of Bhadravati Taluk Panchayat
ಹಲ್ಲೆಗೊಳಗಾದ ಶಾಂತಕುಮಾರ್

By

Published : Dec 29, 2019, 8:46 PM IST

ಶಿವಮೊಗ್ಗ:ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಜಿಲ್ಲೆಯ ಭದ್ರಾವತಿ ತಾಲೂಕಿನ ಕಂಬದಾಳ್ ಹೊಸೂರಿನಲ್ಲಿ ಘಟನೆ ನಡೆದಿದ್ದು, ಭದ್ರಾವತಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಶಾಂತಕುಮಾರ್ (50) ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ನಿನ್ನೆ ರಾತ್ರಿ ಶಾಂತಕುಮಾರ್ ಮನೆಯಲ್ಲಿ ಊಟ ಮಾಡುತ್ತಿದ್ದ ವೇಳೆ ಮನೆಗೆ ಬಂದ ಅದೇ ಗ್ರಾಮದ ಮಂಜುನಾಥ್, ಗಿರೀಶ್ ಹಾಗೂ ಸಿದ್ದಾಪುರ ಗ್ರಾಮದ ಮಧು, ಶಾಂತಕುಮಾರ್ ಅವರನ್ನು ಮನೆಯಿಂದ ಹೊರಗೆ ಬರಹೇಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಶಾಂತಕುಮಾರ್ ಇದನ್ನು ಪ್ರಶ್ನಿಸಿದ್ದಕ್ಕೆ ಚಾಕು ಮತ್ತಿತರ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಶಾಂತಕುಮಾರ್​ ಹೇಳಿದ್ದಾರೆ.

ಹಲ್ಲೆಗೊಳಗಾದ ಶಾಂತಕುಮಾರ್

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಶಾಂತಕುಮಾರ್ ಅವರಿಗೆ ಭದ್ರಾವತಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details