ಶಿವಮೊಗ್ಗ: ವಾಯುವಿಹಾರಕ್ಕೆ ತೆರಳಿದ್ದ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ.
ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ
ಇಂದು ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ಭಜರಂಗದಳದ ಕಾರ್ಯಕರ್ತನ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಕಂಡುಬಂದಿದೆ.
ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ
ನಾಗೇಶ್(25) ಹಲ್ಲೆಗೆ ಒಳಗಾದ ಭಜರಂಗದಳದ ಕಾರ್ಯಕರ್ತ. ಮುಂಜಾನೆ ನೆಹರು ಕ್ರೀಡಾಂಗಣಕ್ಕೆ ವಾಯುವಿಹಾರಕ್ಕೆ ತೆರಳಿ ಮನೆಗೆ ವಾಪಸ್ ಬರುವಾಗ ಹಿಂಬದಿಯಿಂದ ಬಂದ ಕಿಡಿಗೇಡಿಗಳು ದೊಣ್ಣೆಯಿಂದ ನಾಗೇಶ್ ತಲೆ ಹಾಗೂ ಮುಖಕ್ಕೆ ಹೊಡೆದಿದ್ದಾರೆ. ಪರಿಣಾಮ ಮೂಗಿಗೆ ಗಂಭೀರ ಗಾಯವಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಭಜರಂಗದಳದ ಕಾರ್ಯಕರ್ತರು ಪೊಲೀಸರನ್ನು ಆಗ್ರಹಿಸಿದ್ದಾರೆ.