ಶಿವಮೊಗ್ಗ: ಹಲ್ಲೆಗೆ ಒಳಗಾದ ವ್ಯಕ್ತಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಾಗ ಮತ್ತೆ ಹಲ್ಲೆ ನಡೆಸಿರುವ ಘಟನೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ನಡೆದಿದೆ.
ಸಾಗರ: ಹಲ್ಲೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಮೇಲೆ ಮತ್ತೆ ಹಲ್ಲೆ! - ಸಾಗರ ಟೌನ್ ಪೊಲೀಸ್ ಠಾಣೆ
ರಾಷ್ಟ್ರೀಯ ಉದ್ಯೋಗ ಖಾತ್ರಿ ವಿಚಾರದಲ್ಲಿ ಹಲ್ಲೆಗೆ ಒಳಗಾದ ವ್ಯಕ್ತಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಾಗ ಮತ್ತೆ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ನಡೆದಿದೆ.
![ಸಾಗರ: ಹಲ್ಲೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಮೇಲೆ ಮತ್ತೆ ಹಲ್ಲೆ! Attack on hospitalized man in sagara governament hospital](https://etvbharatimages.akamaized.net/etvbharat/prod-images/768-512-7361029-323-7361029-1590551884099.jpg)
ಚೌಡಪ್ಪ ಹಲ್ಲೆಗೊಳಗಾದ ವ್ಯಕ್ತಿ. ಸಾಗರ ತಾಲೂಕಿನ ಕುಗ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಉದ್ಯೋಗ ಖಾತ್ರಿ ವಿಚಾರದಲ್ಲಿ ಚೌಡಪ್ಪ, ಮನೋಜ್ ಕುಗ್ವೆ ಹಾಗೂ ನಾಗರಾಜ್ ಎಂಬುವರ ನಡುವೆ ಗಲಾಟೆ ನಡೆದಿತ್ತು. ಗಲಾಟೆಯಲ್ಲಿ ಹಲ್ಲೆಗೊಳಗಾದ ಚೌಡಪ್ಪ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು.
ಈ ವೇಳೆ ಮತ್ತೆ ಆಸ್ಪತ್ರೆಗೆ ಬಂದ ಮನೋಜ್ ಕುಗ್ವೆ ಹಾಗೂ ನಾಗರಾಜ್, ಚೌಡಪ್ಪನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಅಸ್ಪತ್ರೆಯ ಗಾಜು ಹಾಗೂ ಪೀಠೋಪಕರಣಗಳು ಹಾನಿಯಾಗಿದ್ದು, ಆಸ್ಪತ್ರೆಯ ಕಾರಿಡಾರ್ನಲ್ಲಿ ರಕ್ತ ಚೆಲ್ಲಾಡಿದೆ. ಈ ಬಗ್ಗೆ ಆಸ್ಪತ್ರೆಯ ವೈದ್ಯಾಧಿಕಾರಿ ಪ್ರಕಾಶ್ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.