ಶಿವಮೊಗ್ಗ:ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ 2020-21ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಇಂದು ಮಧ್ಯರಾತ್ರಿಯಿಂದ ಭದ್ರಾ ಡ್ಯಾಂನಿಂದ ಬಲ, ಎಡದಂಡೆ ನಾಲೆಗಳಲ್ಲಿ ನೀರು ಬಿಡಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಇಂಜಿನಿಯರ್ ತಿಳಿಸಿದ್ದಾರೆ.
ಮಧ್ಯರಾತ್ರಿಯಿಂದ ಭದ್ರಾ ಬಲ-ಎಡದಂಡೆ ನಾಲೆಗೆ ನೀರು ಬಿಡುಗಡೆ
ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ 2020-21ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಇಂದು ಮಧ್ಯರಾತ್ರಿಯಿಂದ ಭದ್ರಾ ಡ್ಯಾಂನಿಂದ ಬಲ, ಎಡದಂಡೆ ನಾಲೆಗಳಲ್ಲಿ ನೀರು ಬಿಡಲಾಗುತ್ತಿದೆ. ಹೀಗಾಗಿ ನದಿ ಪಾತ್ರದಲ್ಲಿನ ಜನರು ಎಚ್ಚರದಿಂದಿರಲು ಸೂಚನೆ ನೀಡಲಾಗಿದೆ.
ಇಂದು ಮಧ್ಯರಾತ್ರಿಯಿಂದ ಭದ್ರಾ ಬಲ-ಎಡದಂಡೆ ನಾಲೆಗೆ ನೀರು ಬಿಡುಗಡೆ
ಭದ್ರಾ ಜಲಾನಯನ ಅಚ್ಚುಕಟ್ಟಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರು ಬಿಡುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ಹೀಗಾಗಿ ನದಿ ಪಾತ್ರದಲ್ಲಿನ ಜನರು ಎಚ್ಚರದಿಂದಿರಿ ಎಂದು ಸೂಚನೆ ನೀಡಲಾಗಿದೆ.