ಶಿವಮೊಗ್ಗ:ಗುತ್ತಿಗೆದಾರನ ನಿರ್ಲಕ್ಷ್ಯದಿಂದ ರಸ್ತೆ ಗುಂಡಿಯಲ್ಲಿ ಬಿದ್ದು ಕೆಎಸ್ಆರ್ಟಿ ನೌಕರರೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಹೀಗಾಗಿ ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರ ರಂಗನಾಥಗಿರಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಭದ್ರಾವತಿಯ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್. ರಾಜು ಆಗ್ರಹಿಸಿದ್ದಾರೆ.
ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಆಗ್ರಹ - shimoga news
ಭದ್ರಾವತಿ-ಹೊಳೆಹೊನ್ನೂರು ರಸ್ತೆಯ ಗೌಡರಹಳ್ಳಿ ಬಳಿ ರಸ್ತೆ ಮಧ್ಯದಲ್ಲಿ ದೊಡ್ಡ-ದೊಡ್ಡ ಗುಂಡಿಗಳನ್ನ ತೋಡಲಾಗಿದೆ. ಈ ಗುಂಡಿಯಲ್ಲಿ ಬಿದ್ದು ಕೆಎಸ್ಆರ್ಟಿ ನೌಕರರೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಹೀಗಾಗಿ ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಭದ್ರಾವತಿಯ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭದ್ರಾವತಿ-ಹೊಳೆಹೊನ್ನೂರು ರಸ್ತೆಯ ಗೌಡರಹಳ್ಳಿ ಬಳಿ ರಸ್ತೆ ಮಧ್ಯದಲ್ಲಿ ದೊಡ್ಡ-ದೊಡ್ಡ ಗುಂಡಿಗಳನ್ನ ತೋಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇಲ್ಲಿ ಯಾವುದೇ ಸೂಚನಾ ಫಲಕವಾಗಲಿ, ಬ್ಯಾರಿಕೇಡ್ಗಳಾಗಲಿ ಹಾಕಿಲ್ಲ. ಇದರಿಂದಾಗಿ ಕೆಎಸ್ಆರ್ಟಿ ನೌಕರರೊಬ್ಬರು ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಇದಕ್ಕೆಲ್ಲಾ ಕಾರಣ ಕಳಪೆ ಕಾಮಗಾರಿ.
ಹೀಗಾಗಿ, ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರನ ಪರವಾನಿಗೆ ರದ್ದು ಮಾಡಿ, ಕಳಪೆ ಕಾಮಗಾರಿ ವಿರುದ್ಧ ತನಿಖೆ ನಡೆಸಬೇಕು. ಇದಕ್ಕೆ ಕಾರಣರಾದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧವೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.