ಕರ್ನಾಟಕ

karnataka

ETV Bharat / city

ಶಿವಮೊಗ್ಗದಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಈಶ್ವರಪ್ಪ, ಸಿಟಿ ರವಿ, ಸೋಮಣ್ಣ ಭೇಟಿ..  ಪರಿಹಾರದ ಭರವಸೆ

ಶಿವಮೊಗ್ಗದಲ್ಲಿ ಮಳೆಯ ರೌದ್ರ ನರ್ತನಕ್ಕೆ ಹಲವಾರು ಬಡಾವಣೆಗಳು ಜಲಾವೃತಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಕೆ.ಎಸ್. ಈಶ್ವರಪ್ಪ, ಸಿ.ಟಿ. ರವಿ ಹಾಗೂ ವಿ. ಸೋಮಣ್ಣ ಅವರು ಗಂಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಅಭಯ ನೀಡಿದ್ದಾರೆ.

BJP leaders who promised a proper solution to the people's

By

Published : Aug 11, 2019, 5:14 AM IST

ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆಯ ರೌದ್ರ ನರ್ತನಕ್ಕೆ ಹಲವಾರು ಬಡಾವಣೆಗಳು ಜಲಾವೃತಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಕೆ.ಎಸ್. ಈಶ್ವರಪ್ಪ, ಸಿ.ಟಿ. ರವಿ ಹಾಗೂ ವಿ. ಸೋಮಣ್ಣ ಅವರು ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್​ನ ಗಣಪತಿ ದೇವಾಲಯದ ಆವರಣದಲ್ಲಿರುವ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಅಭಯ ನೀಡಿದರು.

ನೆರೆ ಉಂಟಾದ ಪರಿಣಾಮ ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡಿದ್ದಾರೆ. ಎಲ್ಲಾ ಸಂತ್ರಸ್ತರಿಗೂ, ಮಳೆ ನಿಂತ ಕೂಡಲೇ ಯಾವ ರೀತಿಯ ಪರಿಹಾರ ನೀಡಬೇಕೆಂಬ ನಿಟ್ಟಿನಲ್ಲಿ, ಚರ್ಚಿಸಿ, ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಡಲಾಗುವುದೆಂದು ಭರವಸೆ ನೀಡಿದ್ದಾರೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ವಿಶೇಷ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದಾಗಿಯೂ ತಿಳಿಸಿದರು.

ಭರವಸೆ ನೀಡಿದ ಬಿಜೆಪಿ ನಾಯಕರು
ಇದೇ ವೇಳೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿ ದಶಕಗಳ ಬಳಿಕ ಇಂತಹದೊಂದು ಜಲಪ್ರಳಯ ಉಂಟಾಗಿದೆ. ಈಗಾಗಲೇ ಸಿಎಂ ನೆರೆ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ, ಪರಿಹಾರ ಘೋಷಿಸಿದ್ದಾರೆ. ಅಲ್ಲದೇ, ನಾಳೆ ಕೇಂದ್ರ ಗೃಹಮಂತ್ರಿ ಅಮಿತ್​ ತಾ ಅವರು ಬೆಳಗಾವಿ ಭಾಗದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಬಳಿಕ ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡುವ ವಿಶ್ವಾಸ ಇದೆ ಎಂದರು.

ಶಿವಮೊಗ್ಗ ನಗರದಲ್ಲಿ 253 ಮನೆಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಕಡೆ 721 ಮನೆಗಳು ಬಿದ್ದಿವೆ ಎಂದು ಹೇಳಿದರು.

ABOUT THE AUTHOR

...view details