ಕರ್ನಾಟಕ

karnataka

ETV Bharat / city

ಮಹಾರಾಷ್ಟ್ರ, ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ: ಕೆ.ಎಸ್.ಈಶ್ವರಪ್ಪ - ಶಿವಮೊಗ್ಗ ಸುದ್ದಿ

ಮಹಾರಾಷ್ಟ್ರ ಹಾಗೂ ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ನಡೆಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ

By

Published : Oct 24, 2019, 3:13 PM IST

ಶಿವಮೊಗ್ಗ:ಮಹಾರಾಷ್ಟ್ರ ಹಾಗೂ ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ನಡೆಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ,ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ: ಕೆ.ಎಸ್.ಈಶ್ವರಪ್ಪ

ನಗರದಲ್ಲಿ ಮಾತನಾಡಿದ ಅವರು, ದೇಶದ ಜನತೆ ಬಿಜೆಪಿ ಹಾಗೂ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸವಿಟ್ಟು ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಬಿಜೆಪಿಗೆ ಮತ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯು ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸಿತ್ತು. ಇದರಿಂದ ಬಿಜೆಪಿಯು ಶಿವಸೇನೆ ಜೊತೆ ಸೇರಿಯೇ ಸರ್ಕಾರ ರಚನೆ ಮಾಡಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ದೇಶದ ಜನತೆ ಈ ಹಿಂದೆ ಹೇಗೆ ಮೋದಿಯವರಿಗೆ ಬೆಂಬಲ ನೀಡಿ ಮತ ಹಾಕಿದ್ರೋ, ಅದೇ ರೀತಿ ಮಹಾರಾಷ್ಟ್ರ ಹಾಗೂ ಹರಿಯಾಣ ಜನತೆ ಸಹ ಬಿಜೆಪಿ ಮೇಲೆ ನಂಬಿಕೆ ಹೊಂದಿದ್ದಾರೆ ಎಂದು ಈಶ್ವರಪ್ಪ ಅಭಿಪ್ರಾಯಪಟ್ಟರು.

ABOUT THE AUTHOR

...view details