ಕರ್ನಾಟಕ

karnataka

ETV Bharat / city

ಪಶುವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ - ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು

ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.

Veterinary rape and murder case
ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

By

Published : Nov 30, 2019, 6:42 PM IST

ಶಿವಮೊಗ್ಗ:ಹೈದರಬಾದ್​​ನಲ್ಲಿ ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹೈದಾರಬಾದ್​ನಲ್ಲಿ ನಡೆದ ಈ ಕೃತ್ಯ ದೇಶವೇ ತಲೆ ತಗ್ಗಿಸುವಂತಾಗಿದೆ. ದೇಶದಲ್ಲಿ ಆಗಾಗ್ಗೆ ನಡೆಯುತ್ತಿರುವ ಇಂತಹ ಕೃತ್ಯಗಳನ್ನು ತಡೆಯಲು ಕೇಂದ್ರ ಸರ್ಕಾರ ಒಂದು ರೀತಿಯ ಅಂಕುಶ ಹಾಕುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಸಾರ್ವಜನಿಕವಾಗಿ ಗಲ್ಲಿಗೆ ಹಾಕಬೇಕು. ಈ ರೀತಿ ಮಾಡುವುದರಿಂದ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬಹುದು. ಮಹಿಳಾ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗಳ ಮೂಲಕ ತೆಲಂಗಾಣ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ABOUT THE AUTHOR

...view details