ಕರ್ನಾಟಕ

karnataka

ಆಪ್ತ ಉಮೇಶ್​​ ಮನೆ ಮೇಲೆ ಐಟಿ ದಾಳಿ: ಬಿಎಸ್​ವೈ, ಬಿವೈ ರಾಘವೇಂದ್ರ ಪ್ರತಿಕ್ರಿಯೆ ಹೀಗಿದೆ

By

Published : Oct 7, 2021, 7:06 PM IST

Updated : Oct 7, 2021, 7:26 PM IST

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆ ಮೇಲೆ ನಡೆದ ಐಟಿ ದಾಳಿ ಕುರಿತು ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಂಸದ ಬಿ ವೈ ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

bs yadiyurappa reaction on IT raid
ಐಟಿ ದಾಳಿ ಕುರಿತು ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯೆ

ಶಿವಮೊಗ್ಗ: ಗುತ್ತಿಗೆದಾರ ಉಮೇಶ್ ಮನೆ ಮೇಲೆ ಐಟಿ ದಾಳಿ ವಿಚಾರ ಮಾಧ್ಯಮದಿಂದ ಗೊತ್ತಾಗಿದೆ. ಐಟಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ನಾಳೆ ಐಟಿ ದಾಳಿ ಕುರಿತು ಮಾಹಿತಿ ನೀಡಲಿದ್ದಾರೆ. ಆ ಮಾಹಿತಿ ಬಳಿಕ ನಾನು ಉತ್ತರ ನೀಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಆಪ್ತ ಉಮೇಶ್ ಮನೆ ಮೇಲೆ ನಡೆದ ಐಟಿ ದಾಳಿ ಕುರಿತು ಶಿಕಾರಿಪುರದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿಯ ನಂತರ ಮೊದಲ ಪ್ರತಿಕ್ರಿಯೆ ನೀಡಿದ ಅವರು, ಯಾರೇ ತಪ್ಪು ಮಾಡಿದರೂ ಐಟಿ ಅಧಿಕಾರಿಗಳು ಬಿಡುವುದಿಲ್ಲ. ಅಧಿಕಾರಿಗಳು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳುವ ಮೂಲಕ ಇದೊಂದು ರಾಜಕೀಯ ಪ್ರೇರಿತ ಐಟಿ ದಾಳಿ ಎನ್ನುವುದನ್ನು ಅಲ್ಲಗೆಳೆದರು. ಐಟಿ ದಾಳಿ ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎನ್ನುವ ಮೂಲಕ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ:ಬಿಎಸ್​ವೈ ಆಪ್ತನ ಮನೆ ಸೇರಿ ಬೆಂಗಳೂರಿನ ಹಲವೆಡೆ IT ದಾಳಿ: ಕಾಂಟ್ರಾಕ್ಟರ್ಸ್​, ಉದ್ಯಮಿಗಳಿಗೆ ಆಘಾತ

ಇದೇ ವೇಳೆ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಬೆಳಗ್ಗೆಯಿಂದ ಐಟಿ ರೈಡ್ ನಡೆಯುತ್ತಿದೆ. ಈ ರೀತಿ ಐಟಿ ದಾಳಿ ದೇಶದೆಲ್ಲೆಡೆ ನಡೆಯುತ್ತಿದೆ. ಬೆಂಗಳೂರಿನಲ್ಲಿಯೂ ಐಟಿ ದಾಳಿ ನಡೆದಿದೆ. ನಾಳೆ ಐಟಿ ದಾಳಿ ಕುರಿತು ಉಮೇಶ್ ಉತ್ತರ ನೀಡಲಿದ್ದಾರೆ. ಈ ದಾಳಿ ಬಳಿಕ ತನಿಖೆಯಲ್ಲಿ ಸತ್ಯಾಂಶ ಗೊತ್ತಾಗಲಿದೆ. ಈ ವ್ಯಕ್ತಿ ಬಿಎಸ್​ವೈ ಆಪ್ತನಾಗಿ ಕೆಲಸ ಮಾಡಿದ್ದಾರೆ. ಆದ್ರೆ ಈ ದಾಳಿಯಿಂದ ಉಪ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ. ಎರಡು ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಭವಿಷ್ಯ ನುಡಿದರು.

Last Updated : Oct 7, 2021, 7:26 PM IST

ABOUT THE AUTHOR

...view details