ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳದಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ ಸಾಗರದ ಬಳಿ ಪಲ್ಟಿ ಆಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.
ಖಾಸಗಿ ಬಸ್ ಪಲ್ಟಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು - Bus accident news
ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳದಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ ಆಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.
ಸಾಗರದ ಬಳಿ ಖಾಸಗಿ ಬಸ್ ಪಲ್ಟಿ
ಬಸ್ನಲ್ಲಿ ಒಟ್ಟು ಎಂಟು ಜನ ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಲ್ಲಿ ಒಬ್ಬ ಮಹಿಳೆಗೆ ಮಾತ್ರ ಗಾಯಗಳಾಗಿದ್ದು, ಎಲ್ಲ ಪ್ರಯಾಣಿಕರು ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ ಆಗಿದ್ದಾರೆ.
ಈ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.