ಶಿವಮೊಗ್ಗ: ಜಿಲ್ಲೆಯ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮವನ್ನು ಮೈಸೂರು ಮೃಗಾಲಯ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಸಲುವಾಗಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದರು.
ತ್ಯಾವರೆಕೊಪ್ಪ ಸಿಂಹಧಾಮ ಅಭಿವೃದ್ಧಿ ಸಭೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ - ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮ
ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮವನ್ನು ಮೈಸೂರು ಮೃಗಾಲಯ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಸಲುವಾಗಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದರು.
ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಸಭೆ ನಡೆಸಿದ ಅವರು, ಸಫಾರಿಯನ್ನು ಸಮಗ್ರವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ರೂಪಿಸಿರುವ ಕ್ರಿಯಾಯೋಜನೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಾಹಿತಿ ಪಡೆದರು. ಜತೆಗೆ ಸಫಾರಿಯಲ್ಲಿ ಈಗಾಗಲೇ ಆರಂಭಗೊಂಡಿರುವ ಕಾಮಗಾರಿಗಳ ಪರಿಶೀಲನೆಯನ್ನು ನಡೆಸಿದರು.
ಬಳಿಕ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ಒತ್ತು ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಲಯನ್ ಸಫಾರಿಯನ್ನು ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಮೃಗಾಲಯ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಈಗಾಗಲೇ ಕೆಲ ಕಾಮಗಾರಿ ಆರಂಭಗೊಂಡಿದೆ. ಹುಲಿ ಸಿಂಹಧಾಮಕ್ಕೆ 43 ವಿವಿಧ ಜಾತಿಯ ಪ್ರಾಣಿ,ಪಕ್ಷಿಗಳು ಬರಲಿದ್ದು, ಪ್ರಮುಖ ಪ್ರವಾಸಿ ಕೇಂದ್ರವಾಗಲಿದೆ ಎಂದರು.