ಕರ್ನಾಟಕ

karnataka

ETV Bharat / city

ಬಸವೇಶ್ವರ ಪುತ್ಥಳಿ ಪ್ರತಿಷ್ಠಾಪನೆಗೆ ಒಪ್ಪಿಗೆ: ಸಿಎಂಗೆ ಅಭಿನಂದನೆ ಸಲ್ಲಿಸಿದ ಮರುಳಸಿದ್ದ ಸ್ವಾಮೀಜಿ - Establishment Basaveshwara statue

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಸವೇಶ್ವರ ಪುತ್ಥಳಿ ಅನಾವರಣದ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಂಡಿದ್ದು, ಈ ಹಿನ್ನೆಲೆ ಚಿಕ್ಕಮಗಳೂರಿನ ಬಸವಮಂದಿರದ ಡಾ. ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ ಸಿಎಂಗೆ ಅಭಿನಂದನೆ ತಿಳಿಸಿದ್ದಾರೆ.

marulasidda Swamiji
ಮರುಳಸಿದ್ದ ಸ್ವಾಮೀಜಿ

By

Published : Jul 17, 2021, 11:26 AM IST

ಶಿವಮೊಗ್ಗ: ನಗರದ ಗಾಂಧಿಪಾರ್ಕ್ ಬಳಿಯ ಡಿವಿಎಸ್ ವೃತ್ತದಲ್ಲಿ 12ನೇ ಶತಮಾನದ ಸಮಾಜ ಸುಧಾರಕ ಹಾಗೂ ವಚನಕಾರ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಪುತ್ಥಳಿ ಪ್ರತಿಷ್ಠಾಪನೆಗೆ ಒಪ್ಪಿಗೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಚಿಕ್ಕಮಗಳೂರಿನ ಬಸವಮಂದಿರದ ಡಾ. ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ, ಬಸವ ಪುತ್ಥಳಿ ಪ್ರತಿಷ್ಠಾಪನೆ ಶಿವಮೊಗ್ಗ ನಗರದ ನಾಗರಿಕರ ದಶಕಗಳ ಕನಸು. ಈ ವಿಚಾರಕ್ಕೆ ಈಗ ತಾರ್ಕಿಕ ಅಂತ್ಯ ಸಿಕ್ಕಿರುವುದು ಸಂತೋಷ ತಂದಿದೆ. ಇದರಿಂದಾಗಿ ಸರ್ವ ಸಮಾಜದ ಬಸವ ಅಭಿಮಾನಿಗಳ ಅಪೇಕ್ಷೆ ಈಡೇರಿದೆ.

ಆನಂದಪುರಂ - ಬೆಕ್ಕಿನ ಕಲ್ಮಠದ ಶ್ರೀಗಳು ಕೂಡಾ ಈ ನಿಟ್ಟಿನಲ್ಲಿ ಶ್ರಮಿಸಿದ್ದಾರೆ. ಈ ಕಾರ್ಯ ನೆರವೇರುವಲ್ಲಿ ಸಹಕಾರ ನೀಡಿದ ಜಿಲ್ಲಾ ಉಸ್ತವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್. ರುದ್ರೇಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ಹೆಚ್.ಸಿ. ಯೊಗೇಶ್ ಸೇರಿದಂತೆ ಪಾಲಿಕೆಯ ಎಲ್ಲಾ ಸದಸ್ಯರಿಗೂ ಅಭಿನಂದನೆ ತಿಳಿಸಿದ್ದಾರೆ.

ವಿಡಿಯೋ ಮೂಲಕ ಅಭಿನಂದನೆ ಸಲ್ಲಿಸಿದ ಡಾ. ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ,

ಬಸವೇಶ್ವರರ ಪುತ್ಥಳಿಯನ್ನು ಶಿವಮೊಗ್ಗ ನಗರಕ್ಕೆ ಲಂಡನ್‌ನ ನೀರಜ್ ಪಾಟೀಲ್ ಅವರು ಕೊಡುಗೆಯಾಗಿ ನೀಡಿದ್ದರು. ಶಿವಮೊಗ್ಗ ನಗರ ಪಾಲಿಕೆಯು ಮೂರ್ತಿ ಪ್ರತಿಷ್ಠಾಪನೆಗೆ 2018-19ನೇ ಸಾಲಿನ ಬಜೆಟ್‌ನಲ್ಲಿ 25 ಲಕ್ಷ ರೂ. ಅನುದಾನ ಕೂಡ ಕಾಯ್ದಿರಿಸಿತ್ತು. ನಂತರ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗಿತ್ತು. ಆದರೆ, ಸಾರ್ವಜನಿಕ ಸ್ಥಳಗಳಲ್ಲಿ ಪುತ್ಥಳಿ ಅನಾವರಣ ಮಾಡಬಾರದು ಎಂಬ ನ್ಯಾಯಾಲಯದ ನಿರ್ದೇಶನದ ಹಿನ್ನೆಲೆ ಈ ಪ್ರಸ್ತಾವನೆ ವಾಪಸ್ ಬಂದಿತ್ತು ಎಂದರು.

ಇತ್ತೀಚೆಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಸವೇಶ್ವರ ಪುತ್ಥಳಿ ಅನಾವರಣದ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಹಾಗಾಗಿ ಬಸವೇಶ್ವರ ಪುತ್ಥಳಿ ಪ್ರತಿಷ್ಠಾಪನೆಗೆ ಒಪ್ಪಿಗೆ ನೀಡಿರುವುದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಅಭಿನಂದಿಸಿರುವುದಾಗಿ ಬಸವ ಮರುಳಸಿದ್ದ ಸ್ವಾಮೀಜಿ ತಿಳಿಸಿದ್ದಾರೆ.

ABOUT THE AUTHOR

...view details