ಶಿವಮೊಗ್ಗ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧ ಭದ್ರಾವತಿಯಲ್ಲಿ ದೂರು ದಾಖಲಾಗಿದೆ. ರಾಜ್ಯ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷರಾದ ಸಿ.ಎಂ.ಖಾದರ್, ಭದ್ರಾವತಿಯ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧ ಸಿ.ಎಂ. ಖಾದರ್ ದೂರು - khadar filed case against pramod mutalik
ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿರುವ ಆರೋಪದ ಮೇಲೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧ ಸಿ.ಎಂ.ಖಾದರ್ ದೂರು ದಾಖಲಿಸಿದ್ದಾರೆ.
ಪ್ರಮೋದ್ ಮುತಾಲಿಕ್ ಅವರು ಆಜಾನ್ ವಿಚಾರದಲ್ಲಿ ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಮಾಡುತ್ತಿದ್ದಾರೆ. ಈಗಾಗಲೇ ಆಜಾನ್ ಕುರಿತು ಸುಪ್ರೀಂಕೋರ್ಟ್ ಒಂದು ಆದೇಶ ನೀಡಿದ್ದು, ಅದನ್ನು ಎಲ್ಲರೂ ಪಾಲಿಸುತ್ತಿದ್ದಾರೆ. ಆದರೆ, ಮುತಾಲಿಕ್ ಅವರು ಆಜಾನ್ ಮೈಕ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ. ಸಮಾಜದಲ್ಲಿ ಹಿಂದೂ ಮುಸ್ಲಿಮರು ಸಹೋದರರಂತೆ ಬಾಳ್ವೆ ನಡೆಸುತ್ತಿದ್ದಾರೆ. ಸಮಾಜದ ಶಾಂತಿಯನ್ನು ಕದಡುವ ಪ್ರಮೋದ್ ಮುತಾಲಿಕ್ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಟೌನ್ ಪೊಲೀಸ್ ಠಾಣೆಯ ಪಿಐ ರಾಘವೇಂದ್ರ ಕಾಂಡಿಕೆ ಅವರಿಗೆ ದೂರು ನೀಡಿದ್ದಾರೆ.
(ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಲಂಗೋಟಿ ಜನ ಬಿಚ್ಚಿ ಕಳಿಸ್ತಾರೆ: ಆರಗ ಜ್ಞಾನೇಂದ್ರ)