ಶಿವಮೊಗ್ಗ: ವಿಜಯಪುರ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೆರವೇರಿಸಿದರು.
ವಿಜಯಪುರ ವಿಮಾನ ನಿಲ್ದಾಣದ ಶಂಕುಸ್ಥಾಪನೆ ನೆರವೇರಿಸಿದ ಸಿಎಂ - CM laid the foundation stone of Vijayapur Airport
ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವರ್ಚುಯಲ್ ಕಾರ್ಯಕ್ರಮದ ಮೂಲಕ ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ವಿಜಯಪುರ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಕಾರ್ಯಕ್ರಮ
ಶಿವಮೊಗ್ಗ ನಗರದ ಸರ್ಕ್ಯೂಟ್ ಹೌಸ್ನಿಂದ ವಿಜಯಪುರ ವಿಮಾನ ನಿಲ್ದಾಣದ 220 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವರ್ಚುಯಲ್ ಮೂಲಕ ಶಂಕುಸ್ಥಾಪನೆಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರುಳೀಧರ್, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಸೇರಿದಂತೆ ಹಲವು ಅಧಿಕಾರಿಗಳು, ರಾಜಕೀಯ ನಾಯಕರು ಉಪಸ್ಥಿತರಿದ್ದರು.