ಶಿವಮೊಗ್ಗ: ಜಿಲ್ಲೆಯಲ್ಲಿರುವ ಲೆವೆಲ್ ಕ್ರಾಸಿಂಗ್ ಗೇಟ್ ನಂ. 34, 49 ಮತ್ತು 52 ರ ಬದಲಾಗಿ ನಿರ್ಮಾಣಗೊಳ್ಳಲಿರುವ ರಸ್ತೆ ಮೇಲ್ಸೇತುವೆಗಳ ಅಡಿಗಲ್ಲು ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಚಾಲನೆ ನೀಡಿದರು.
ರಸ್ತೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿದ ಸಿಎಂ - ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ
ಸಿಎಂ ಯಡಿಯೂರಪ್ಪನವರು ಶಿವಮೊಗ್ಗ ನಗರದ ಮೂರು ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ. 34, 49 ಹಾಗೂ 52 ರ ಬದಲಿ ರಸ್ತೆಯ ಮೇಲ್ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
![ರಸ್ತೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ರಸ್ತೆಯ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮ](https://etvbharatimages.akamaized.net/etvbharat/prod-images/768-512-10636389-thumbnail-3x2-lek.jpg)
ನಗರದ ರೈಲ್ವೆ ನಿಲ್ದಾಣದ ಮೈದಾನದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿರುವ ಲೆವೆಲ್ ಕ್ರಾಸಿಂಗ್ ಗೇಟ್ ನಂ.34, 49 ಮತ್ತು 52 ರ ಬದಲಾಗಿ ನಿರ್ಮಾಣಗೊಳ್ಳಲಿರುವ ಮೂರು ರಸ್ತೆ ಮೇಲ್ಸೇತುವೆಗಳ ಅಡಿಗಲ್ಲು ಸಮಾರಂಭದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದರು.
ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಕುಮಾರ್ ಬಂಗಾರಪ್ಪ, ಅರಗ ಜ್ಞಾನೇಂದ್ರ, ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಭಾರತೀ ಶೆಟ್ಟಿ, ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್ ಸೇರಿದಂತೆ ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರು ಉಪಸ್ಥಿತರಿದ್ದರು.