ಶಿವಮೊಗ್ಗ: ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅವೈಜ್ಞಾನಿಕ ಆಸ್ತಿ ತೆರಿಗೆ ನೀತಿ ಖಂಡಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಅವೈಜ್ಞಾನಿಕ ಆಸ್ತಿ ತೆರಿಗೆ ನೀತಿ ಖಂಡಿಸಿ ಕಾಂಗ್ರೆಸ್, ಜೆಡಿಎಸ್ ಸದಸ್ಯರಿಂದ ಸಭೆಯ ಬಾವಿಗಿಳಿದು ಪ್ರತಿಭಟನೆ ಸಾಮಾನ್ಯ ಸಭೆ ಆರಂಭವಾಗುತ್ತಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಕೊರೊನಾ ಸಂಕಷ್ಟದ ಸಮಯದಲ್ಲಿ ಅವೈಜ್ಞಾನಿಕವಾಗಿ ಆಸ್ತಿ ತೆರಿಗೆ ಹೆಚ್ಚಳ ಮಾಡಲಾಗಿದೆ. ದೇಶದ ಜನರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೆಚ್ಚಳ ಮಾಡುವ ಮೂಲಕ ಮೋದಿ ಅವರ ಕಾಲದಲ್ಲಿ ಜನರು ಸಾಯುವ ಪರಿಸ್ಥಿತಿ ಎದುರಾಗಿದೆ. ಮೋದಿ ಎಂದರೆ ಸಾವು ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಈ ವೇಳೆ, ಆಡಳಿತ ಪಕ್ಷವಾದ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ಕ್ಷೇಮೆ ಕೇಳುವಂತೆ ಆಗ್ರಹಿಸಿದರು. ಇಷ್ಟಕ್ಕೆ ಸುಮ್ಮನಾಗದ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಚೌಕಿದಾರ್ ಚೋರ್ ಹೈ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ನಗರದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಿದ್ದ ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಾಯಕರುಗಳ ಗಲಾಟೆ, ಗದ್ದಲಗಳೇ ಹೆಚ್ಚಾಗಿತ್ತು. ನಂತರ ಮಹಾನಗರ ಪಾಲಿಕೆ ಆಯುಕ್ತರು ಆಸ್ತಿ ತೆರಿಗೆ ಹೆಚ್ಚಳ ಸಂಬಂಧಿಸಿದಂತೆ ಪುನರ್ ಪರೀಶಿಲಿಸಲು ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಹೇಳುವ ಮೂಲಕ ಗಲಾಟೆಗೆ ತೆರೆ ಎಳೆದರು.
ಇದನ್ನೂ ಓದಿ:ಫೇಸ್ಬುಕ್ ಫ್ರೆಂಡ್ನೊಂದಿಗೆ ಲವ್ನಲ್ಲಿ ಬಿದ್ದ ವಿವಾಹಿತೆ... ಮದುವೆ ಮಾಡಿಕೊಳ್ಳಲು ಮನೆಯಿಂದ ಪರಾರಿ!