ಕರ್ನಾಟಕ

karnataka

ETV Bharat / city

ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಕೊರೊನಾ ವರದಿ... - shimoga latest news

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೊರೊನಾ ವರದಿ....

ಕೊರೊನಾ ವರದಿ
ಕೊರೊನಾ ವರದಿ

By

Published : Oct 21, 2020, 7:57 PM IST

Updated : Oct 21, 2020, 8:59 PM IST

ಶಿವಮೊಗ್ಗ: ಜಿಲ್ಲೆಯಲ್ಲಿಂದು 128 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 642ಕ್ಕೆ ಏರಿಕೆಯಾಗಿದೆ.

ಇಂದು 119 ಜನ ಗುಣಮುಖರಾಗಿದ್ದು, ಈವರೆಗೆ ಒಟ್ಟು 17,453 ಜನರು ಗುಣಮುಖರಾಗಿದ್ದಾರೆ. ಕೊರೊನಾದಿಂದ ಓರ್ವ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 337ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 867 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 155, ಕೋವಿಡ್ ಕೇರ್ ಸೆಂಟರ್​ನಲ್ಲಿ 22, ಖಾಸಗಿ ಆಸ್ಪತ್ರೆಯಲ್ಲಿ 140, ಹೋಂ ಐಸೋಲೇಷನ್​ನಲ್ಲಿ 516, ಆರ್ಯುವೇದ ಕಾಲೇಜಿನಲ್ಲಿ 34 ಸೋಂಕಿತರಿದ್ದಾರೆ. ಜಿಲ್ಲೆಯಲ್ಲಿ ಕಂಟೇನ್ಮೆಂಟ್​ ಝೋನ್​ ಸಂಖ್ಯೆ 7,136 ಏರಿಕೆಯಾಗಿದೆ. ಇದರಲ್ಲಿ‌ 5,149 ಝೋನ್​ ವಿಸ್ತರಣೆಯಾಗಿದೆ.

ತಾಲೂಕುವಾರು ಸೋಂಕಿತರ ಸಂಖ್ಯೆ:ಶಿವಮೊಗ್ಗ 4, ಭದ್ರಾವತಿ 22, ಶಿಕಾರಿಪುರ 31, ತೀರ್ಥಹಳ್ಳಿ 08, ಸೊರಬ 03, ಸಾಗರ 07, ಹೊಸನಗರ 13 ಹಾಗೂ ಬೇರೆ ಜಿಲ್ಲೆಯಿಂದ ಆಗಮಿಸಿದ ಮೂವರಲ್ಲಿ ಸೋಂಕು ದೃಢಪಟ್ಟಿದೆ. ಇಂದು ಜಿಲ್ಲೆಯಲ್ಲಿ 3,243 ಜನರ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 3,003 ಜನರ ವರದಿ ಬಂದಿದೆ.

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈ ದಿನ 73 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 11,759 ಕ್ಕೆ ಏರಿಕೆಯಾಗಿದೆ. ಈ ದಿನ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ 178 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಜಿಲ್ಲೆಯಲ್ಲಿ ಒಟ್ಟು 10,614 ಜನ ಸೋಂಕಿತರು ಜಿಲ್ಲಾ ಕೋವೀಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾದಂತೆ ಆಗಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 20, ಕಡೂರು ತಾಲೂಕಿನಲ್ಲಿ 25, ಮೂಡಿಗೆರೆ ತಾಲೂಕಿನಲ್ಲಿ 05, ತರೀಕೆರೆ ತಾಲೂಕಿನಲ್ಲಿ 22, ಶೃಂಗೇರಿ ತಾಲೂಕಿನಲ್ಲಿ 01 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 134 ಕ್ಕೆ ಏರಿಕೆಯಾಗಿದೆ. ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,759 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 833 ಸಕ್ರಿಯ ಪ್ರಕರಣಗಳಿವೆ.

Last Updated : Oct 21, 2020, 8:59 PM IST

ABOUT THE AUTHOR

...view details